ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಲು ನ್ಯಾ. ಜಿ.ಕೆ. ದಾಕ್ಷಾಯಿಣಿ ಕರೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಲು ನ್ಯಾ. ಜಿ.ಕೆ. ದಾಕ್ಷಾಯಿಣಿ ಕರೆ

ಹಾಸನ: ಆರೋಗ್ಯಕರವಾದ ಜೀವನ ಮಾಡುವುದು ಎಲ್ಲರ ಹಕ್ಕು, ದೊಡ್ಡ ಪಿಡುಗಾಗಿರುವ  ಏಡ್ಸ್ ಕಾಯಿಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರು ಸಹಕಾರ  ನೀಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಾಕ್ಷಾಯಿಣಿ ಜಿ ಕೆ ಎಂದು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು  ವಿಶ್ವ ಏಡ್ಸ್ ದಿನಾಚರಣೆ  ಅಂಗವಾಗಿ ಏರ್ಪಡಿಸಿದ್ದ  ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಾರ್ವಜನಿಕರಲ್ಲಿ ಈ ಕಾಯಿಲೆಯ  ಕುರಿತು ಅರಿವು ಮೂಡಿಸಲು ಹೆಚ್ಚಿನ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಹೆಚ್‌ಐವಿ ಪೀಡಿತರನ್ನು ಸಮಾಜದಲ್ಲಿ ಬೇರೆ ರೀತಿಯಲ್ಲಿ ನೋಡುವಂತಹ ಪರಿಸ್ಥಿತಿ ಬಂದಿದೆ. ಅವರು ಕೂಡ ಎಲ್ಲರ ಹಾಗೆ ಮನುಷ್ಯರು ಸರಿಯಾದ ಚಿಕಿತ್ಸೆ ನೀಡಿ ಅವರು ಒಳ್ಳೆಯ ಜೀವನ ಮಾಡಲು ಸಹಕರಿಸಬೇಕು  ಎಂದು ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಶಿವಸ್ವಾಮಿ ಅವರು ಮಾತನಾಡಿ ಈ ಕಾಯಿಲೆ ಹೆಚ್ಚು ಯುವಜನರಲ್ಲಿ ಬರುವುದರಿಂದ ನಮ್ಮ ಪ್ರಗತಿ ಕುಂಠಿತವಾಗುತ್ತಿದೆ. ಈ ಕಾಯಿಲೆ ಯಾವ ರೀತಿ ಬರುತ್ತದೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿವಹಿಸಲು  ಹದಿಹರೆಯದ ಮಕ್ಕಳಿಗೆ ಶಾಲಾ ಕಾಲೇಜು ಸಮುದಾಯ ಮಟ್ಟದಲ್ಲಿ ಅರಿವು ಮೂಡಿಸುವುದರಿಂದ ಈ ಕಾಯಿಲೆಯನ್ನು  ಪರಿಣಾಮಕಾರಿಯಾಗಿ ತಡೆಯಬಹುದು ಎಂದು ತಿಳಿಸಿದರು.

      ಕಾರ್ಯಕ್ರಮಕ್ಕೆ ಮೊದಲು ನಗರದ ಜಿಲ್ಲಾಧಿಕಾರಿ ಕಛೇರಿಯಿಂದ ಆಕರ್ಷಕ ಮೆರವಣಿಗೆಗೆ ಚಾಲನೆ ನೀಡಿದರು.

ಇದೆ ವೇಳೆ ಜಿಲ್ಲಾ ಏಡ್ಸ್  ಕ್ಷಯ ರೋಗದ ನಿಯಂತ್ರಣಾಧಿಕಾರಿಗಳಾದ ಡಾ||ವಿಜಯ್ ಗೊರೂರು ಎನ್.ಡಿ, ಜಿಲ್ಲಾ ಅಂಧತ್ವ ನಿವಾರಣಾ ಮತ್ತು ಕುಷ್ಠರೋಗ ನಿಯಂತ್ರಣಾಧಿಕಾರಿಗಳಾದ  ಡಾ||ಪಿ. ನಾಗೇಶ್ ಆರಾಧ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರುಂಧತಿ, ಕಲಾವಿದರಾದ ಬಿ.ಟಿ ಮಾನವ ಮತ್ತಿತರರು ಹಾಜರಿದ್ದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು