ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಧರ್ಮಸ್ಥಳ ಪ್ರಕರಣಕ್ಕೆ ಇಂದು ಮಹತ್ವದ ದಿನ: ಪಾಯಿಂಟ್ 13 ರತ್ತ, ಎಲ್ಲರ ಚಿತ್ತ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಧರ್ಮಸ್ಥಳ ಪ್ರಕರಣಕ್ಕೆ ಇಂದು ಮಹತ್ವದ ದಿನ: ಪಾಯಿಂಟ್ 13 ರತ್ತ, ಎಲ್ಲರ ಚಿತ್ತ

ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕವಾಗಿ ಶವ ಹೂತಿಟ್ಟ ಪ್ರಕರಣದ ಉತ್ಖನನದಲ್ಲಿ ಇಂದು ನಿರ್ಣಾಯಕ ಹಂತ ತಲುಪಿದೆ. ದೂರುದಾರ ಈವರೆಗೆ ಸೂಚಿಸಿದ ಗುರುತುಗಳಲ್ಲಿ ಕೊನೆಯ ಹಂತವಾಗಿ ಇಂದು ಉತ್ಖನನ ಕಾರ್ಯ ಶುರುವಾಗಿದೆ.

ಪ್ರಕರಣದ ಪ್ರಮುಖ ಸಾಕ್ಷಿ ಭೀಮಾ ಹೆಸರಿನಿಂದ ಕರೆಯಲ್ಪಡುವ ವ್ಯಕ್ತಿ ಸೂಚಿಸಿದ 13 ನೇ ಪಾಯಿಂಟ್ ನಲ್ಲಿ ಉತ್ಖನನ ಕಾರ್ಯ ನಡೆಯಲಿದೆ. ಭೀಮಾ ಹೇಳಿದಂತೆ 13 ನೇ ಪಾಯಿಂಟ್ ನಲ್ಲೇ ಅತಿ ಹೆಚ್ಚು ಶವ ಹೂತಿಟ್ಟ ಬಗ್ಗೆ ಈ ದಿನ ಬಹಳ ಕುತೂಹಲಕಾರಿ ವಿಷಯವಾಗಿದೆ.

ಈಗಾಗಲೇ ಅನಾಮಿಕ ದೂರುದಾರ ಗುರುತಿಸಿದ 13ರ ಪೈಕಿ 12 ಪಾಯಿಂಟ್ಗಳಲ್ಲಿ ಶೋಧ ಕಾರ್ಯ ನಡೆದಿದೆ. ಹಲವು ಜಾಗಗಳಲ್ಲಿ ಹೆಚ್ಚಿನ ಸಾಕ್ಷ್ಯ ಲಭಿಸಿವೆ ಎಂಬ ಬಗ್ಗೆಯೂ ಎಸ್ಐಟಿ ಮೂಲಗಳಿಂದ ತಿಳಿದು ಬಂದಿದೆ. ಆದರೆ ಈಗಾಗಲೇ ಸಿಕ್ಕ ಕಳೆಬರಗಳಿಗೆ ಎಷ್ಟು ವರ್ಷವಾಗಿದೆ, ಅವುಗಳ ಸ್ಥಿತಿ ಏನಿದೆ ಎಂಬ ಬಗ್ಗೆ ಎಸ್ಎಸ್ಎಲ್ ರಿಪೋರ್ಟ್ ಮೂಲಕವೇ ಉತ್ತರ ಸಿಗಲಿದೆ.

ಮಂಗಳವಾರ ಕಾಡಿನಲ್ಲಿ ಪರಿಶೀಲನೆ ನಡೆಸುವಾಗ ಎರಡು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾದ ಶವಗಳ ಮೂಳೆಗಳು ದೊರೆತಿದೆ. ಇದು ದೂರುದಾರ ಹೂತಿದ್ದಲ್ಲ, ಅಸಹಜ ಸಾವಿನ ಪ್ರಕರಣ ಎಂದು ಹೇಳಲಾಗುತ್ತಿದೆ. ಈ ನಡುವೆ ಮಂಗಳವಾರ ನಡೆದ ಎರಡು ಸಮಾಧಿಯ ಶೋಧ ಪ್ರಕರಣದಲ್ಲಿ ಯಾವುದೇ ಮಹತ್ವದ ಸಾಕ್ಷ್ಯಗಳು ಸಿಕ್ಕಿಲ್ಲ ಎನ್ನಲಾಗಿದೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಎಂದಿನಂತೆ ಅಧಿಕಾರಿಗಳು, ಎಸ್ಐಟಿ ಮತ್ತು ದೂರುದಾರನನ್ನೊಳಗೊಂಡ ತಂಡ ನೇತ್ರಾವತಿ ನದಿ ತಟದ ಬಂಗ್ಲೆ ಗುಡ್ಡಕ್ಕೆ ಬರಲಿದೆ. ಎಸ್ಐಟಿ ತನಿಖೆಯ ಬಿಗ್ ಡೇ ಇಂದೇ ಆಗಿದ್ದು, ದೂರಿಗೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಗಳು ಲಭ್ಯವಾಗುತ್ತಾ ಎಂಬ ಕುತೂಹಲವಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು