ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿವೆ – ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿವೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 17 : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ. ಬಿಜೆಪಿ ಮಿತ್ರ ಪಕ್ಷಗಳು ಸೋಲನ್ನು ಅನುಭವಿಸಲಿದ್ದು , ವಿಪಕ್ಷಗಳ ಒಕ್ಕೂಟ ಗೆಲುವು ಸಾಧಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಯಾಗಿದ್ದು, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ವಿಪಕ್ಷಗಳ ನಾಯಕರು ಇಂದು ಮತ್ತು ನಾಳೆ , ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟುಗೂಡಿ ಚುನಾವಣೆ ಎದುರಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ವಿವರಿಸಿದರು.

ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುತ್ತಿರುವುದೇ ಬಿಜೆಪಿಯ ಕೊಡುಗೆ
ದೇಶವನ್ನು ಲೂಟಿ ಮಾಡಿದಂತಹ ಪಕ್ಷಗಳು ಇಂದು ಒಂದಾಗುತ್ತಿವೆ ಎಂಬ ಬಿಜೆಪಿ ಪಕ್ಷದ ಹೇಳಿಕೆಗೆ ಉತ್ತರ ನೀಡುತ್ತಾ, ಈ ದೇಶದ ಆರ್ಥಿಕತೆಯನ್ನು ಹಾಳು ಮಾಡಿದವರೇ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿಯವರು ಬಂದ ನಂತರ ಬೆಲೆ ಏರಿಕೆ, ಬಡವರು, ರೈತರು, ದಲಿತರು ಇಂದು ಬದುಕಲು ಅಸಾಧ್ಯವಾದ ಪರಿಸ್ಥಿತಿ ಬಂದಿದೆ. ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುವಂತಾಗಿದೆ. ಇದು ಬಿಜೆಪಿಯ ಕೊಡುಗೆ ಎಂದು ತಿಳಿಸಿದರು.
ʼಜೆಡಿಎಸ್ ನ ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ, ನಾವು ಎನ್ ಡಿ ಎ ಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ ಎಂದು ಜೆಡಿಎಸ್ ನ ಕುಮಾರಸ್ವಾಮಿಯವರು ಹೇಳುತ್ತಿರುವ ಬಗ್ಗೆ ಉತ್ತರ ನೀಡುತ್ತಾ , ಜೆಡಿಎಸ್ ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು. ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಎಂದರ್ಥʼ ಎಂದರು.

ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರೆನ್ನಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ , ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು