ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದ ತೆರಿಗೆ ಪಾಲನ್ನು ಶೇ.50 ರಷ್ಟು ಹೆಚ್ಚಿಸಲು ಹಣಕಾಸು ಆಯೋಗಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk • ದೇಶ, ರಾಜ್ಯ

• 1 ನಿಮಿಷದ ಓದು

ರಾಜ್ಯದ ತೆರಿಗೆ ಪಾಲನ್ನು ಶೇ.50 ರಷ್ಟು ಹೆಚ್ಚಿಸಲು ಹಣಕಾಸು ಆಯೋಗಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ಶೇ. 50 ರಷ್ಟು ತೆರಿಗೆ ಪಾಲನ್ನು ಸಂಬಂಧಿಸಿದ ರಾಜ್ಯಗಳಿಗೆ ನಿಗದಿಪಡಿಸಬೇಕು. ಸೆಸ್ ಮತ್ತು ಸರ್ಚಾರ್ಜ್ ಅನ್ನು ಒಟ್ಟು ತೆರಿಗೆ ಆದಾಯದ ಶೇ. 5 ಕ್ಕೆ ಮಿತಿಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ 16 ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿದ್ದಾರೆ.

“ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ” ಎಂದು 16 ನೇ ಹಣಕಾಸು ಆಯೋಗದ ಸಭೆಯ ನಂತರ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5,000 ಕೋಟಿ ಯಂತೆ ಐದು ವರ್ಷಕ್ಕೆ ₹25,000 ಕೋಟಿ ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು ₹55,000 ಕೋಟಿ ವೆಚ್ಚವಾಗಲಿದ್ದು, ಈ ಮೊತ್ತದಲ್ಲಿ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಹಣಕಾಸು ಆಯೋಗಕ್ಕೆ ಕೋರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66% ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ.

ವಿಶೇಷವಾಗಿ ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು ಎಂದು ಕೇಂದ್ರ ಹಣಕಾಸು ಆಯೋಗದ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸ್ವತಃ ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು