ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜಕೀಯ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರ ಬಳಸಿಕೊಳ್ಳುವವರು ದೇಶದ್ರೋಹಿಗಳು: ಬಿಜೆಪಿಯನ್ನು ಪರೋಕ್ಷವಾಗಿ ಕುಟುಕಿದ ಸದಾನಂದ ಗೌಡ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ರಾಜಕೀಯ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರ ಬಳಸಿಕೊಳ್ಳುವವರು ದೇಶದ್ರೋಹಿಗಳು: ಬಿಜೆಪಿಯನ್ನು ಪರೋಕ್ಷವಾಗಿ ಕುಟುಕಿದ ಸದಾನಂದ ಗೌಡ

ಬೆಂಗಳೂರು,ಏ.14- ತಮ್ಮ ರಾಜಕಾರಣದ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವವರು ದೇಶದ್ರೋಹಿಗಳು ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಮಠವೇ ಇರಲಿ ಅಥವಾ ಬೇರೆ ಯಾವುದೇ ಧಾರ್ಮಿಕ ಕೇಂದ್ರವಾಗಲೀ ಅವುಗಳ ಸಮಾಜಸೇವೆ ಮಾಡುವ ಕೇಂದ್ರಗಳು. ಅವುಗಳ ಕುರಿತು ರಾಜಕಾರಣಕ್ಕಾಗಿ ಮಾತನಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಯಾರೂ ಕೂಡ ಯಾವುದೇ ಮಠದ ಮೇಲೆ ಅನಗತ್ಯವಾಗಿ ಟೀಕೆ ಮಾಡುವುದು, ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ. ಒಕ್ಕಲಿಗರ ಮಠಕ್ಕೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆ ಇದೆ. ಆ ಮಠವನ್ನು ಯಾರೂ ಕೂಡ ಅನಗತ್ಯವಾಗಿ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು. ಹಿಂದಿನ ಸ್ವಾಮೀಜಿಗಳಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಕೇವಲ ಒಕ್ಕಲಿಗರಿಗೆ ಮಾತ್ರ ಸೀಮಿತವಾಗಿರಲಿಲ್ಲ ಎಲ್ಲಾ ಸಮುದಾಯವನ್ನು ಮುನ್ನಡೆಸಿದ್ದರು. ಈಗಿನ ಶ್ರೀಗಳು ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಹೇಳಿದರು.

ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದಾಗ ನನಗೆ ಕೊನೆ ಕ್ಷಣದಲ್ಲಿ ಬರುವಂತೆ ಸೂಚನೆ ಬಂದಿತ್ತು. ನಾನು ಅನಗತ್ಯವಾಗಿ ಮಾತನಾಡಬಾರದೆಂದು ಸುಮ್ಮನಿದ್ದೇನೆ. ಮಠಗಳು, ಮಠಾೀಶರ ಬಗ್ಗೆ ಸಮಾಜ ತನ್ನದೇ ಆದ ಗೌರವ ಇಟ್ಟುಕೊಂಡಿರುತ್ತದೆ. ಅದನ್ನು ಉಳಿಸುವುದು ಅಗತ್ಯ ಎಂದರು.

ಶ್ರೀಗಳು ಆದಿಚುಂಚನಗಿರಿ ಮಠ ವಿದ್ಯಾಸಂಸ್ಥೆಗಳು, ಆರೋಗ್ಯ ಸೇವೆಯಲ್ಲಿ ತಮ್ಮ ಕಾರ್ಯಗಳನ್ನು ತೊಡಗಿಸಿಕೊಂಡಿದ್ದಾರೆ. ನಾನು ಸಮುದಾಯದ ವ್ಯಕ್ತಿಯಾಗಿ ನಾನು ಒಪ್ಪುವುದಿಲ್ಲ. ದಕ್ಷಿಣ ಕರ್ನಾಟಕದ ಸುಮಾರು 10 ಜಿಲ್ಲೆಯಲ್ಲಿ ತನ್ನದೇ ಆದ ಸ್ವಾಭಿಮಾನದಿಂದ ಬದುಕುತ್ತಿದ್ದಾರೆ. ಈ ಸಮುದಾಯದವರು ಪ್ರಧಾನಮಂತ್ರಿ ಆಗಿದ್ದಾರೆ, ಮಂತ್ರಿಗಳಾಗಿದ್ದಾರೆ. ಅಲ್ಲದೆ ಯಾವುದೇ ರಾಜಕಾರಣಿ ಕೆಂಪೇಗೌಡರ ಹೆಸರು ಹೇಳದೇ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು.

ಕಳೆದ 4 ದಿನಗಳಿಂದ ಬಹಳ ದೊಡ್ಡ ಚರ್ಚೆ ಒಕ್ಕಲಿಗರ ಬಗ್ಗೆ, ಒಕ್ಕಲಿಗರ ಮಠದ ಬಗ್ಗೆ ಚರ್ಚೆ ಆಗುತ್ತಿರುವುದು ಬೇಸರದ ಸಂಗತಿ. ಯಾವುದೇ ರಾಜಕೀಯದಲ್ಲಿ ತೊಡಗಿಸಿಕೊಳ್ಳದ ಅದ್ಬುತ ಮಠದ ಶ್ರೀಗಳು ಚುನಾವಣೆ ಸಂದರ್ಭದಲ್ಲಿ ಚರ್ಚೆಗೆ ಬಂದಿದ್ದು ನೋವಿನ ವಿಷಯ. ಚುನಾವಣೆ ವೇಳೆ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಬರೀ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಒಕ್ಕಲಿಗರ ಸಮುದಾಯದ ಬಗ್ಗೆ ಯಾರೇ ಮಾತನಾಡಿದ್ದು ತಪ್ಪು. ನಾನು ಇದನ್ನು ಸುತಾರಂ ಒಪ್ಪುವುದಿಲ್ಲ ಎಂದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು