ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ, ಇನ್ನು ಪಾದಯಾತ್ರೆ ಅವಶ್ಯಕತೆಯಿಲ್ಲ: ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿಕೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ, ಇನ್ನು ಪಾದಯಾತ್ರೆ ಅವಶ್ಯಕತೆಯಿಲ್ಲ: ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿಕೆ

ತುಮಕೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸ್ವಾಗತಿಸಿದ್ದಾರೆ. ನಾಗೇಂದ್ರ ಅವರು ತೆಗೆದುಕೊಂಡಿರುವ ನಿರ್ಧಾರ ಅತ್ಯಂತ ಸೂಕ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ. ಸೋಮಣ್ಣ, “ರಾಜ್ಯ ಸರ್ಕಾರಕ್ಕೆ ತನ್ನದೇ ಆದ ವಿಶ್ವಾಸಾರ್ಹತೆ ಇರುತ್ತದೆ. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ವ್ಯಕ್ತಪಡಿಸಿದ ಭಾವನೆಗಳಿಗೆ ಸ್ಪಂದಿಸಿ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು ಒಬ್ಬ ಬುದ್ಧಿವಂತ ನಾಯಕರಾಗಿದ್ದು, ಒಳ್ಳೆಯ ತೀರ್ಮಾನವನ್ನೇ ತೆಗೆದುಕೊಂಡಿದ್ದಾರೆ. ಅವರ ಈ ನಡೆ ಅವರಿಗೆ ಹಾಗೂ ಸರ್ಕಾರಕ್ಕೆ ಒಳ್ಳೆಯದನ್ನೇ ಮಾಡಲಿದೆ,” ಎಂದು ಹೇಳಿದರು.

ಇದೇ ವೇಳೆ ದಲಿತ ನಾಯಕನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, “ದಲಿತರು, ಸವರ್ಣೀಯರು ಎಂಬ ಭೇದಭಾವವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು. ಇಲ್ಲಿ ಜಾತಿಯ ಪ್ರಶ್ನೆಗಿಂತ ರಾಜ್ಯ ಮತ್ತು ಜನರ ಹಿತ ಮುಖ್ಯವಾಗುತ್ತದೆ. ಆರೋಪ ಮುಕ್ತರಾಗುವವರೆಗೂ ದೂರ ಉಳಿಯುವ ಅವರ ನಿರ್ಧಾರ ಸರಿಯಾಗಿದೆ,” ಎಂದರು. ಬಳ್ಳಾರಿ ಪಾದಯಾತ್ರೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಾಗೇಂದ್ರ ಅವರ ರಾಜೀನಾಮೆಯ ನಂತರ ಪಾದಯಾತ್ರೆಯ ಅಗತ್ಯತೆ ಇರುವುದಿಲ್ಲ ಎನಿಸುತ್ತದೆ, ಆದರೆ ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು