ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿ.ವಿ. ಘಟಕ ಕಾಲೇಜುಗಳನ್ನು ಸರ್ಕಾರ ತನ್ನ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಆಂದೋಲನ

P

Peepal Media Desk • ರಾಜ್ಯ

• 1 ನಿಮಿಷದ ಓದು

ವಿ.ವಿ. ಘಟಕ ಕಾಲೇಜುಗಳನ್ನು ಸರ್ಕಾರ ತನ್ನ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಆಂದೋಲನ

ಮಂಗಳೂರು: ಇಲ್ಲಿನ ವಿ ವಿ ಘಟಕ ಕಾಲೇಜುಗಳನ್ನು ರಾಜ್ಯ ಸರಕಾರದ ಅಧೀನಕ್ಕೆ ಪಡೆಯಲು ಆಗ್ರಹಿಸಿ ನಿರ್ಣಯ ಕೈಗೊಳ್ಳವಂತೆ ಕುರ್ನಾಡು, ಬಾಳೆಪುಣಿ,ಬೋಳಿಯಾರ್ ಗ್ರಾಮ ಪಂಚಾಯತ್ ಗಳಿಗೆ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಪ್ರಬಲ ಜನಾಭಿಪ್ರಾಯದಿಂದಾಗಿ ಮುಚ್ಚುವ ನಿರ್ಧಾರವನ್ನು ಸಡಿಲಿಸಿ, ಅಡ್ಮಿಷನ್ ಆರಂಭಿಸಲಾಗಿದ್ದ ಮಂಗಳೂರು ವಿ ವಿಯ ನಾಲಕ್ಕು ಘಟಕ ಪದವಿ ಕಾಲೇಜುಗಳನ್ನು ಮುಚ್ಚುವ ಪ್ರಕ್ರಿಯೆ ಮತ್ತೆ ಆರಂಭಗೊಂಡಿವೆ‌. ಕೊಣಾಜೆಯ ಮಂಗಳೂರು ವಿ ವಿ ಆವರಣದಲ್ಲಿರುವ ಪದವಿ ಕಾಲೇಜು, ಹಾಗೂ ನೆಲ್ಯಾಡಿ ಪದವಿ ಕಾಲೇಜುಗಳಲ್ಲಿ ಬಿ ಕಾಂ ಹೊರತು ಪಡಿಸಿ ಉಳಿದ ವಿಭಾಗಗಳಲ್ಲಿ ಅಡ್ಮಿಷನ್ ತಡೆ ಹಿಡಿದು ಪ್ರಥಮ ವರ್ಷದ ತರಗತಿಗಳನ್ನು ರದ್ದುಗೊಳಿಸಲಾಗುತ್ತಿದೆ. ಇನ್ನುಳಿದ ಎರಡು ಘಟಕ ಪದವಿ ಕಾಲೇಜುಗಳ ಸ್ಥಿತಿ ಇದಕ್ಕಿಂತ ಭಿನ್ನವಿಲ್ಲ. ಈ ಹಿನ್ನಲೆಯಲ್ಲಿ ವಿ ವಿ ಘಟಕ ಪದವಿ ಕಾಲೇಜುಗಳನ್ನು ರಾಜ್ಯ ಸರಕಾರದ ಅಧೀನಕ್ಕೆ ಪಡೆದು ಶಿಕ್ಷಣ ಇಲಾಖೆಯಿಂದಲೇ ನಡೆಸಬೇಕು ಎಂಬ ಬೇಡಿಕೆಯನ್ನು ಬಲಗೊಳಿಸಲು, ಘಟಕ ಕಾಲೇಜುಗಳನ್ನು ಉಳಿಸುವ ಹೋರಾಟವನ್ನು ತೀವ್ರಗೊಳಿಸಲು ಮಂಗಳೂರು ವಿ ವಿ ಘಟಕ ಪದವಿ ಕಾಲೇಜುಗಳ ಉಳಿಸಿ ಹೋರಾಟ ಸಮಿತಿ ನಿರ್ಧರಿಸಿದೆ‌.

ಅದರ ಭಾಗವಾಗಿ ಉಳ್ಳಾಲ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳು “ಘಟಕ ಪದವಿ ಕಾಲೇಜುಗಳನ್ನು ರಾಜ್ಯ ಸರಕಾರವೇ ಅಧೀನಕ್ಕೆ ಪಡೆದು ಶಿಕ್ಷಣ ಇಲಾಖೆಯ ಮೂಲಕ ನಡೆಸಬೇಕು” ಎಂಬ ನಿರ್ಣಯವನ್ನು ಕೈಗೊಂಡು ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಲು ತೀರ್ಮಾನಿಸಲಾಗಿದೆ.

ಇಂದು ಬೋಳಿಯಾರ್ ,ಕುರ್ನಾಡು ಹಾಗೂ ಬಾಳೆಪುಣಿ ಗ್ರಾಮ ಪಂಚಾಯತ್ ಗಳಿಗೆ ಹೋರಾಟ ಸಮಿತಿಯ ನಿಯೋಗ ಭೇಟಿ ಪಂಚಾಯತ್ ಅಧ್ಯಕ್ಷರುಗಳಿಗೆ ವಿಷಯ ಮನದಟ್ಟು ಮಾಡಿ ವಿನಂತಿ ಪತ್ರವನ್ನು ನೀಡಲಾಯಿತು. ಕುರ್ನಾಡು ಪಂಚಾಯತ್ ನಲ್ಲಿ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೇಶವ್ ಉಪಸ್ಥಿತಿಯಲ್ಲಿ ವಿನಂತಿ ಪತ್ರ ನೀಡಲಾಯಿತು. ಬೋಳಿಯಾರ್ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾರಾಣಿಯವರಿಗೆ ವಿನಂತಿ ಪತ್ರ ನೀಡಲಾಯಿತು.

ಬಾಳೆಪುಣಿ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ವೆಂಕಟೇಶ್,ಸದಸ್ಯರಾದ ಯಾಕುಬ್ ಮತ್ತು ಅಬ್ದುಲ್ ರಹಿಮಾನ್ ಉಪಸ್ಥಿತಿಯಲ್ಲಿ ವಿನಂತಿ ಪತ್ರ ನೀಡಲಾಯಿತು. ಗ್ರಾಮ ಪಂಚಾಯತ್ ಪ್ರತಿನಿಧಿಗಳು ಹೋರಾಟ ಸಮಿತಿಯ ವಿನಂತಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಹೋರಾಟ ಸಮಿತಿಯ ನಿಯೋಗದಲ್ಲಿ , ಹೋರಾಟ ಸಮಿತಿಯ ಸಂಚಾಲಕ ರಿಝ್ವಾನ್ ಹರೇಕಳ, ಮುಖಂಡರಾದ ರಝಾಕ್ ಮುಡಿಪು ಫಾರೂಕ್ ಕೊಣಾಜೆ, ಬಾಪು ಅಮ್ಮೆಂಬಳ‌,ಶಮೀರ್ ಬೋಳಿಯಾರ್,ಫರಾನ್ ಬೋಳಿಯಾರ್ ,ರಿಯಾಝ್ ಬೋಳಿಯಾರ್ ಮುಂತಾದವರು ಹಾಜರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version