ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಾಲ್ಮಿಕಿ ನಿಗಮದ ಪ್ರಕರಣ: 6 ದಿನಗಳವರೆಗೆ ಬಿ.ನಾಗೇಂದ್ರ ಇಡಿ ವಶಕ್ಕೆ

P

Peepal Media Desk • ರಾಜ್ಯ

• 1 ನಿಮಿಷದ ಓದು

ವಾಲ್ಮಿಕಿ ನಿಗಮದ ಪ್ರಕರಣ: 6 ದಿನಗಳವರೆಗೆ ಬಿ.ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದ ನೇರ ಆರೋಪಿ ಮಾಜಿ ಸಚಿವ ಬಿ ನಾಗೇಂದ್ರ ಬಂಧಿಸಲಾಗಿದ್ದು, ಅವರನ್ನು ಜುಲೈ 18ರವರೆಗೆ ಇಡಿ ತನ್ನ ವಶಕ್ಕೆ ಪಡೆದುಕೊಂಡಿದೆ.

ಈ ಹಿಂದೆ, ಪರಿಶಿಷ್ಟ ಪಂಗಡ ಇಲಾಖೆಯ ಸಚಿವರಾಗಿದ್ದ ಬಿ ನಾಗೇಂದ್ರವನ್ನು ಇಡಿ ಕಸ್ಟಡಿಗೆ ನೀಡಿ ನ್ಯಾ. ಸಂತೋಷ್​ ಗಜಾನನ ಭಟ್​ ಆದೇಶ ಹೊರಡಿಸಿದ್ದಾರೆ.

ಎರಡು ದಿನಗಳ ಹಿಂದೆ ಇಡಿ ಅದಿಕಾರಿಗಳು ನಾಗೇಂದ್ರ, ಬಸನಗೌಡ ದದ್ದಲ್ ಸೇರಿ ಹಲವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಗುರುವರ ರಾತ್ರಿ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ನಂತರ ಶನಿವಾರ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಇರುವ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್​​ ಎದುರು ಹಾಜರುಪಡಿಸಲಾಗಿತ್ತು. ಇಡಿ ಅವರ ಮನವಿಯನ್ನು ಆಲಿಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ನ್ಯಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ​ ಆದೇಶ ಹೊರಡಿಸಿದ್ದಾರೆ.

ನಿಗಮದ ಮಾಜಿ ಎಂಡಿ ಪದ್ಮನಾಭ್ ಅವರು ನಾಗೇಂದ್ರರ ಸೂಚನೆಯ ಮೇಲೆ ಕೆಲವು ಬ್ಯಾಂಕ್‌ ಖಾತೆ ತೆರೆಯಲಾಗಿದೆ ಎಂದು ವಿಚಾರಣೆಯ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಸಭೆಗೆ ನಾಗೇಂದ್ರ ಹಾಜರಾಗಿರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆಈಗಾಲೇ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಅವರ ಡೆತ್ ​​ನೋಟ್​​ನಲ್ಲಿ ಸಚಿವ ಎಂದು ಉಲ್ಲೇಖವಾಗಿದೆ. ನಾಗೇಂದ್ರ ಆಪ್ತ ಹರೀಶ್​ಗೆ ಪದ್ಮನಾಭ್ 25 ಲಕ್ಷ ರೂ. ನೀಡಿರುವ ಬಗ್ಗೆಯೂ ಇಡಿ ತನಿಖೆ ನಡೆಸಿದೆ. ಹಗರಣದಲ್ಲಿ ನಾಗೇಂದ್ರ ಪ್ರಮುಖ ಆರೋಪಿ ಎಂಬುದಕ್ಕೆ ಹಲವು ಸಾಕ್ಷ್ಯಗಳನ್ನು ಇಡಿ ಈಗಾಗಲೇ ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದೆ ಎನ್ನಲಾಗಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version