ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಾಲ್ಮೀಕಿ ನಿಗಮ ಹಗರಣ | ಅಧಿವೇಶನದಿಂದ ಸರ್ಕಾರ ಪಲಾಯನ ಮಾಡಿದೆ, ಮುಂದಿನ ತಿಂಗಳಿಂದ ಪಾದಯಾತ್ರೆ ಆರಂಭಿಸಲಿದ್ದೇವೆ: ಆರ್. ಅಶೋಕ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ವಾಲ್ಮೀಕಿ ನಿಗಮ ಹಗರಣ | ಅಧಿವೇಶನದಿಂದ ಸರ್ಕಾರ ಪಲಾಯನ ಮಾಡಿದೆ, ಮುಂದಿನ ತಿಂಗಳಿಂದ ಪಾದಯಾತ್ರೆ ಆರಂಭಿಸಲಿದ್ದೇವೆ: ಆರ್. ಅಶೋಕ್

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ನಾಯಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿಗದಿಯಂತೆ ಜುಲೈ 26ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನವನ್ನು ವಿರೋಧ ಪಕ್ಷದ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಸರ್ಕಾರ ಮೂರು ದಿನ ಮುಂಚಿತವಾಗಿಯೇ ಅನಿರ್ದಿಷ್ಟಾವಧಿಗೆ ಮುಂದೂಡಿ ಓಡಿಹೋಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರಿಗೆ ಸೇರಬೇಕಿದ್ದ ₹180 ಕೋಟಿಗೂ ಅಧಿಕ ಹಣವನ್ನು ಲೂಟಿ ಮಾಡಲಾಗಿದೆ.

ಸಿಬಿಐ ಮತ್ತು ಇಡಿ ಸಲ್ಲಿಸಿರುವ ಚಾರ್ಜ್‌ಶೀಟ್‌ಗಳಲ್ಲಿ ನಾಗೇಂದ್ರ ಅವರೇ ಪ್ರಮುಖ ಕಿಂಗ್‌ಪಿನ್ ಎಂಬುದು ಬಹಿರಂಗವಾಗಿದೆ. ಕಾಂಗ್ರೆಸ್ ಮುಖಂಡರಿಗೆ ಹಣ ವರ್ಗಾವಣೆ ಮಾಡುವ ಕುರಿತು ಅವರ ಆಪ್ತರೊಂದಿಗೆ ನಡೆಸಿರುವ ಸಂಭಾಷಣೆಗಳು ವಿಧಿವಿಜ್ಞಾನ ಪ್ರಯೋಗಾಲಯದ (FSL) ತನಿಖೆಯಲ್ಲೂ ಸಾಬೀತಾಗಿವೆ” ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯಗಳಿದ್ದು, ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಸಿದ್ದರಾಮಯ್ಯನವರೇ ಅಧಿವೇಶನಕ್ಕೆ ಗೈರಾಗಿದ್ದರು ಎಂದು ವಾಗ್ದಾಳಿ ನಡೆಸಿದ ಅಶೋಕ್, “ಅಧಿವೇಶನವನ್ನು ಮುಕ್ತಾಯಗೊಳಿಸಿ ಸರ್ಕಾರ ತಪ್ಪಿಸಿಕೊಳ್ಳಲು ಯತ್ನಿಸಿದರೂ ನಾವು ಈ ಹೋರಾಟವನ್ನು ಕೈಬಿಡುವುದಿಲ್ಲ. ಮುಂದಿನ ತಿಂಗಳು ಒಂದನೇ ತಾರೀಖಿನಿಂದ ದಲಿತರ ಕಾಲೋನಿಗಳು ಮತ್ತು ಬಡಾವಣೆಗಳಲ್ಲಿ ಬಿಜೆಪಿ ವತಿಯಿಂದ ಬೃಹತ್ ಪಾದಯಾತ್ರೆ ನಡೆಸಿ, ಈ ಬೃಹತ್ ಹಗರಣವನ್ನು ಜನರ ಮುಂದೆ ತೆರೆದಿಡಲಿದ್ದೇವೆ. ತಪ್ಪಿತಸ್ಥರ ವಿರುದ್ಧ ಸಂಪೂರ್ಣ ಕ್ರಮ ಜರುಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ಎಚ್ಚರಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು