ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಸಿ.ಎಂ. ಸಿದ್ದರಾಮಯ್ಯ ಕೃತಜ್ಞತೆ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಸಿ.ಎಂ. ಸಿದ್ದರಾಮಯ್ಯ ಕೃತಜ್ಞತೆ

ವರುಣಾ (ಚಾಮರಾಜನಗರ) ಏ 1: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು.

ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ ಎಂದರು.

ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್ ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ , ರಸಗೊಬ್ಬರ ಬೆಲೆ ಕಡಿಮೆ ಆಗತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗ್ತದಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರೀ 56 ಇಂಚಿನ ಖಾಲಿ ಎದೆ ಇದ್ದರೆ ಸಾಲದು. ಅದರೊಳಗೆ ಮಾತೃ ಹೃದಯ ಇರಬೇಕು. ಇಲ್ಲದಿದ್ದರೆ ಹೀಗೇ ಆಗೋದು. ಉದ್ಯೋಗ ಸೃಷ್ಟಿ‌ ಆಗೋದಿಲ್ಲ. ರೈತರ ಆದಾಯವೂ ದುಪ್ಪಟ್ಟಾಗುವುದಿಲ್ಲ ಎಂದು ಟೀಕಿಸಿದರು.

ಮುಂದಿನ ಜನ್ಮದಲ್ಲಿ ಮುಸ್ಲೀಮನಾಗಿ ಹುಟ್ಟುತ್ತೇನೆ ಎಂದವರು ದೇವೇಗೌಡರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದವರೂ ಇದೇ ದೇವೇಗೌಡರು. ಈಗ ತಮಗೂ ನರೇಂದ್ರ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಯಾಕಿಷ್ಟು ಈ ನಾಟಕ ದೇವೇಗೌಡರೇ, ನೀವು ಹೇಳಿದ್ದನ್ನು ನೆನಪಿಸಿದರೆ ಅದು ಗರ್ವ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಕೃತಜ್ಞತೆಯ ಮಾತುಗಳನ್ನಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ‌.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಸೇರಿ ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರು , ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸ್ಥಳೀಯ ನಾಯಕರುಗಳು ಸಭೆಯಲ್ಲಿ ಉಪಸ್ಥಿತರಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಶಪಥ ಮಾಡಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು