ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಮೂರು ದಿನಗಳ ಕಾಲ ವರುಣನ ಅಬ್ಬರ – ಹೈ ಅಲರ್ಟ್ ಘೋಷಣೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಮೂರು ದಿನಗಳ ಕಾಲ ವರುಣನ ಅಬ್ಬರ – ಹೈ ಅಲರ್ಟ್ ಘೋಷಣೆ

ಬೆಂಗಳೂರು‌ : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧ ಭಾಗಗಳಲ್ಲಿ (Rain Alert) ಗುಡುಗು-ಮಿಂಚಿನ ಸಹಿತ ಭರ್ಜರಿ ಮಳೆಯಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಪ್ರಮುಖ ಮುನ್ಸೂಚನೆಯೊಂದನ್ನು ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಭಾಗದಲ್ಲಿ ಮುಂದುವರಿಯಲಿದೆ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಭಾನುವಾರ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ಆರ್ಭಟ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳ ಸ್ಥಿತಿ ಏನು?
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಬಹುದು.

ಬೆಂಗಳೂರು ಹಾಗೂ ದಕ್ಷಿಣ ಒಳನಾಡಿಗೆ ಅಲರ್ಟ್
ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು,  ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ , ಚಿತ್ರದುರ್ಗ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ವಾತಾವರಣದಲ್ಲಿ ಭಾರಿ ಬದಲಾವಣೆಯಾಗಲಿದೆ. ಈ ಭಾಗಗಳಲ್ಲಿ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗಿನೊಂದಿಗೆ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.

ಹಠಾತ್ ಹವಾಮಾನ ವೈಪರೀತ್ಯ ಹಾಗೂ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಬಾಗಲಕೋಟೆಯಲ್ಲಿ ರೈತರಿಗೆ ಸಂಕಷ್ಟ
ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಮಾತ್ರ ವರುಣದೇವ ಕಣ್ಣಾಮುಚ್ಚಾಲೆ ಆಡುತ್ತಿದ್ದಾನೆ. ಮುಂಗಾರು ಆರಂಭದ ಮೊದಲ ಎರಡು ಮೂರು ದಿನಗಳಲ್ಲಿ ಇಲ್ಲಿ ಸುರಿದ ಭಾರಿ ಮಳೆಗೆ ಇಡೀ ಜಿಲ್ಲೆ ಬೆಚ್ಚಿಬಿದ್ದಿತ್ತು. ಅತಿಯಾದ ಮಳೆಯ ಪರಿಣಾಮವಾಗಿ ಜಿಲ್ಲೆಯ ಸುಮಾರು 42ಕ್ಕೂ ಹೆಚ್ಚು ಮನೆಗಳು ನೆಲಕಚ್ಚಿದ್ದು, ಆಶ್ರಯ ಕಳೆದುಕೊಂಡ ಕುಟುಂಬಗಳು ಕಣ್ಣೀರಿಡುತ್ತಿವೆ. ಇನ್ನೇನು ಮಳೆ ಹಿಡಿದರೆ ಬಿಡುವುದಿಲ್ಲ ಎಂದುಕೊಳ್ಳುವಷ್ಟರಲ್ಲೇ ನಿಧಾನವಾಗಿ ತಣ್ಣಗಾಗಿರುವ ವರುಣ ಸದ್ಯ ಕಣ್ಮರೆಯಾಗಿದ್ದಾನೆ. ಮಳೆ ಸಕಾಲಕ್ಕೆ ಕೈಕೊಟ್ಟಿರುವುದರಿಂದ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 25 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಬಿತ್ತನೆ ಮಾಡಿದ್ದರು. ಆದರೆ ಈ ಬಾರಿ ಮಳೆಯ ಕೊರತೆಯಿಂದಾಗಿ ಕೇವಲ 3 ಸಾವಿರ ಹೆಕ್ಟೇರ್ ಬಿತ್ತನೆ ಆಗಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು