ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂದಿನ 3 ದಿನಗಳವರೆಗೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತೀ ಹೆಚ್ಚು ಉಷ್ಣಾಂಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 2 ನಿಮಿಷದ ಓದು

ಮುಂದಿನ 3 ದಿನಗಳವರೆಗೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತೀ ಹೆಚ್ಚು ಉಷ್ಣಾಂಶ

ಬೆಂಗಳೂರು : ರಾಜ್ಯಾದ್ಯಂತ ಒಣ ಹವೆ (Karnataka Weather) ಇರುವ ಸಾಧ್ಯತೆಯಿದ್ದು, ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿ.ಸೆ. ಮತ್ತು 18 ಡಿ.ಸೆ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಫೆ. 26ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದ್ದು, ಮಾರ್ಚ್‌ 2 ಮಾರ್ಚ್ 2025): ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಮುಂದಿನ 3 ದಿನಗಳವರೆಗೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. 

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಭಾನುವಾರ ದಾವಣಗೆರೆಯಲ್ಲಿ ಅತೀ ಕಡಿಮೆ ಉಷ್ಣಾಂಶ 15 ಡಿ.ಸೆ. ದಾಖಲಾಗಿದೆ. ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 36.9 ಡಿ.ಸೆ. ದಾಖಲಾಗಿದೆ. ಇನ್ನು ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 ಡಿ.ಸೆ. ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ವಿಜಯಪುರ, ಧಾರವಾಡ, ರಾಯಚೂರು, ಹಾವೇರಿ, ಬಾಗಲಕೋಟೆ ಮತ್ತು ಗದಗದಲ್ಲಿ 17-18 ಡಿ.ಸೆ., ಉತ್ತರ ಒಳನಾಡಿನ ಬೆಳಗಾವಿ ನಗರ, ಕಲಬುರಗಿ ಮತ್ತು ಕೊಪ್ಪಳ ದಲ್ಲಿ 19-21 ಡಿ.ಸೆ., ಮತ್ತು ದಕ್ಷಿಣ ಒಳನಾಡಿನ ಆಗುಂಬೆ, ಬೆಂಗಳೂರು ಏರ್ಪೋರ್ಟ್ (ಎಚ್‌ಎಎಲ್), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ ಮತ್ತು ಮಡಿಕೇರಿಯಲ್ಲಿ 13-18 ಡಿ.ಸೆ. ವ್ಯಾಪ್ತಿಯಲ್ಲಿತ್ತು.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಏರ್ಪೋರ್ಟ್‌ (ಕೆಐಎಎಲ್), ಚಿತ್ರದುರ್ಗ, ಮೈಸೂರು ಮತ್ತು ಶಿವಮೊಗ್ಗ ದಲ್ಲಿ 18-21 ಡಿ.ಸೆ. ವ್ಯಾಪ್ತಿಯಲ್ಲಿತ್ತು.ಕನಿಷ್ಠ ತಾಪಮಾನವು ಕರಾವಳಿಯ ಪಣಂಬೂರಿನಲ್ಲಿ (-2.4 ಡಿ.ಸೆ.) ಇಳಿಕೆಯಾಗಿದೆ. ಉತ್ತರ ಒಳನಾಡಿನ ಹಾವೇರಿಯಲ್ಲಿ (-5.2 ಡಿ.ಸೆ.) ಮತ್ತು ಬೆಳಗಾವಿ ನಗರದಲ್ಲಿ (-3.0 ಡಿ.ಸೆ.) ಗಮನಾರ್ಹ ಕುಸಿತ (-2.7 ಡಿ.ಸೆ.) ಕೊಪ್ಪಳ -2.7 ಡಿ.ಸೆ.), (-2.2 ಡಿ.ಸೆ.), ಬೆಳಗಾವಿಯ ವಿಮಾನ ನಿಲ್ದಾಣ, ಧಾರವಾಡ ಮತ್ತು ರಾಯಚೂರಿನಲ್ಲಿ ಇಳಿಕೆಯಾಗಿದೆ. ದಕ್ಷಿಣ ಒಳನಾಡಿನ ಹಾಸನದಲ್ಲಿ (-6.1 ಡಿ.ಸೆ.) ಮತ್ತು ಆಗುಂಬೆಯ ಮೇಲೆ (-3.3 ಡಿ.ಸೆ.), ಚಿಂತಾಮಣಿಯಲ್ಲಿ (-3.1 ಡಿ.ಸೆ.) ಮಡಿಕೇರಿ(-3.2 ಡಿ.ಸೆ.), ಚಾಮರಾಜನಗರದಲ್ಲಿ (-2.6 ಡಿ.ಸೆ.) ಮೇಲೆ ಇಳಿಕೆಯಾಗಿದೆ. ರಾಜ್ಯದ ಉಳಿದ ಭಾಗಗಳಿಗಿಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

ಗರಿಷ್ಠ ತಾಪಮಾನವು ಕರಾವಳಿಯಲ್ಲಿ 34-36 ಡಿ.ಸೆ. ವ್ಯಾಪ್ತಿಯಲ್ಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ ಮತ್ತು ಹಾವೇರಿಯಲ್ಲಿ 32-34 ಡಿ.ಸೆ. ಮತ್ತು ವಿಜಯಪುರ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ 31-37 ಡಿ.ಸೆ., ದಕ್ಷಿಣ ಒಳನಾಡಿನ ಚಿಕ್ಕಮಣಿ, ಚಿಕ್ಕಮಗಳೂರು, ಚಿಂತಾಮಣಿ, ಬೆಂಗಳೂರು, ಮೈಸೂರು ಮತ್ತು ಮಡಿಕೇರಿಯಲ್ಲಿ 31- 33 ಡಿ.ಸೆ. ಹಾಗೂ ದಕ್ಷಿಣ ಒಳನಾಡಿನ ಆಗುಂಬೆ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-35 ಡಿ.ಸೆ. ಇತ್ತು. ಕಳೆದ 24 ಗಂಟೆಗಳಲ್ಲಿ, ದಕ್ಷಿಣ ಒಳನಾಡಿನ ಆಗುಂಬೆಯಲ್ಲಿ ಗರಿಷ್ಠ ತಾಪಮಾನದಲ್ಲಿ (+2.9°C) ಗಮನಾರ್ಹ ಏರಿಕೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಷಯಗಳು: #kannada #karnataka #peepal #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು