ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಮಾನ ನಿಲ್ದಾಣದ ಒತ್ತುವರಿ ಕಾರ್ಯಚರಣೆಗೆ ಗ್ರಾಮಸ್ಥರ ವಿರೋಧ ಪ್ರತಿಭಟನೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 2 ನಿಮಿಷದ ಓದು

ವಿಮಾನ ನಿಲ್ದಾಣದ ಒತ್ತುವರಿ ಕಾರ್ಯಚರಣೆಗೆ ಗ್ರಾಮಸ್ಥರ ವಿರೋಧ ಪ್ರತಿಭಟನೆ

ಹಾಸನ: ವಿಮಾನ ನಿಲ್ದಾಣ ಕಾಪೌಂಡ್ ಕಾಮಗಾರಿ ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ಒಂದು ಕಡೆ ಪ್ರತಿಭಟನೆ ನಡೆಸುತ್ತಿದ್ದರೇ ಇನ್ನೊಂದು ಕಡೆ ಗ್ರಾಮಸ್ಥರು ಹತ್ತಿರ ಸುಳಿಯದಂತೆ ಭೂಸ್ವಾಧೀನವಾಗಿರುವ ಪ್ರದೇಶದ ಒತ್ತುವರಿ ಜಾಗವನ್ನು ಪೊಲೀಸ್ ಬಂದೋಬಸ್ತ್ ಮೂಲಕ ಜೆಸಿಬಿಯಿಂದ ತೆರವು ಕಾರ್ಯಚರಣೆಯಲ್ಲಿ ತೊಡಗಿದ್ದರು.

ಈ ಹಿಂದೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ತೆರವು ಕಾರ್ಯಚರಣೆಗೆ ಗ್ರಾಮಸ್ಥರು ಅಡ್ಡಿಪಡಿಸಿದ್ದರು. ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಮಧ್ಯ ಪ್ರವೇಶಿಸಿ ಜಂಠಿಯಾಗಿ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದರು. ಸಭೆ ನಡೆಸಿದ ಬಳಿಕ ಸಭೆ ಫಲಪ್ರದ ಆಗಿರಲಿಲ್ಲ. ನಂತರದಲ್ಲಿ ಡಿಸಿ ಸಿ. ಸತ್ಯಭಾಮ ಅವರ ಆದೇಶದಂತೆ ಬುಧವಾರದಂದು ಪೊಲೀಸ್ ಬಂದೊಬಸ್ತ್ ಮೂಲಕ ತೆರವು ಮಾಡಲಾಗಿದೆ.

ಕೆಐಎಡಿಬಿ ಅಧಿಕಾರಿ ಹಾಗೂ ಹಾಸನ ಜಿಲ್ಲಾಡಳಿತದ ವತಿಯಿಂದ ಹಾಸನ ವಿಮಾನ ನಿಲ್ದಾಣದ ೫೩೬.೨೪ ಎಕರೆ ಭೂಮಿ ಸುತ್ತ ಜಮೀನಿನ ದುರಸ್ತಿ ಹಾಗೂ ಪೋಡಿ ಮಾಡದೆ ಪೊಲೀಸ್ ಬಂದೋಬಸ್ ನಲ್ಲಿ ವಿಮಾನ ನಿಲ್ದಾಣದ ಸುತ್ತ ಬಲವಂತವಾಗಿ ಕಾಂಪೌಂಡ್ ನಿರ್ಮಾಣ ಮಾಡುವುದನ್ನು ವಿರೋಧಿಸಿ ಒಂದು ಕಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರೆ ಇನ್ನೊಂದು ಕಡೆ ಒತ್ತುವರಿ ಜಾಗ ತೆರವು ಕಾರ್ಯಚರಣೆಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ಮಾಡಲಾಯಿತು. ಸುಮಾರು ೩೦೦ ಜನ ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ವಿಮಾನ ನಿಲ್ದಾಣ ಕಾಂಪೌಂಡ್ ಕಾಮಗಾರಿ ನಡೆಸಿದರು.

 ಇದೆ ವೇಳೆ ಗ್ರಾಮಸ್ಥರಾದ ಬೊಮ್ಮೇಗೌಡ ಹಾಗೂ ಕೆ.ಪಿ.ಆರ್.ಎಸ್. ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ನಿರ್ಮಾಣವಾಗುವ ವಿಮಾನ ನಿಲ್ದಾಣ ಪ್ರದೇಶದಲ್ಲಿ ಸುತ್ತ ಮುತ್ತಲ ಗ್ರಾಮಗಳ ರೈತರು ಈ ಮೊದಲು ಕಾಮಗಾರಿ ನಡೆಯುತ್ತಿರುವ ಜಾಗದಲ್ಲೇ ನಾವು ಸಂಚರಿಸುತ್ತಿದ್ದು, ಕಾಂಪೌಂಡ್ ನಿರ್ಮಾಣ ಮಾಡುವುದರಿಂದ  ನಮ್ಮ ಗ್ರಾಮಗಳಿಗೆ ತೆರಳಲು ಸುಮಾರು ೭ ಕಿ.ಮೀ ಬಳಸಿ ಬರಬೇಕಾಗಿದೆ. ನಮಗೆ ಈಗ ರಸ್ತೆ ಇಲ್ಲವಾಗಿದೆ. ಪ್ರತ್ಯೇಕ ರಸ್ತೆ ಮಾಡಿ ಕೊಡಿ ಎಂಬ ರೈತರ ಬೇಡಿಕೆಯನ್ನು ಒಪ್ಪಿ ೫೩೬ ಎಕರೆಯಲ್ಲೇ ವಿಮಾನ ನಿಲ್ದಾಣದ ಬೌಂಡರಿ ಅಂಚಿನಲ್ಲೇ ಸುಮಾರು ೯ ಮೀಟರ್ ಅಗಲದ ೫ ಕಿ.ಮೀ.ಉದ್ದದ ರಸ್ತೆ ನಿರ್ಮಾಣಕ್ಕೆ ಸುಮಾರು ೫ ಎಕರೆ ಜಾಗದಲ್ಲಿ ರಸೆ ನಿರ್ಮಿಸಿಕೊಡಲು ಈ ಮುಂಚೆ ಕೆಐಡಿಬಿ ಅಧಿಕಾರಿಗಳು ಒಪ್ಪಿಗೆ ನೀಡಿದ್ದು. 





ಈಗ ಆ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡದೆ. ಮತ್ತೆ ರೈತರ ಭೂಮಿಯನ್ನು ಭೂಸ್ವಾಧೀನ ಮಾಡಿ ರಸ್ತೆ ನಿರ್ಮಾಣ ಮಾಡಿಕೊಡುವುದಾಗಿ ಜಿಲ್ಲಾಡಳಿತ ಅಧಿಕಾರಿಗಳು ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ ರೈತರಿಗೆ ತಮ್ಮ ಜಮೀನು ಮತ್ತು ಗ್ರಾಮಗಳಿಗೆ ತೆರಳಲು ಸಂಪರ್ಕ ರಸ್ತೆ ನೀಡುವಂತೆ ಕಾಂಪೌಂಡ್ ನಿರ್ಮಾಣ ಮಾಡಿದರೆ ನಮಗೆ ಓಡಾಡಲು ರಸ್ತೆ ಇಲ್ಲ. ತಮ್ಮ ಗ್ರಾಮಗಳಿಗೆ ತೆರಳಲು ಪರ್ಯಾಯ ರಸ್ತೆ ಬೇಕು. ಪರ್ಯಾಯವಾಗಿ ನೀಡಿರುವ ರಸ್ತೆಗೆ ಕಾಮಗಾರಿಯೂ ಆಗಿಲ್ಲ ಎಂದರು.





 ಜಮೀನು ಕಳೆದುಕೊಂಡ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು. ಭೂಮಿ ಕಳೆದುಕೊಂಡ ಕೆಲವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಪರಿಹಾರ ನೀಡುವಂತೆ ಆಗ್ರಹಿಸಿ ಬೂವನಹಳ್ಳಿ ಗ್ರಾಮಸ್ಥ ಮುಖಂಡ ದಿನೇಶ್ ಹಾಗೂ ಬೊಮ್ಮೇಗೌಡ ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನ ರೈತರು ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.




 ನಂತರ ಪ್ರತಿಭಟನೆಕಾರರು ಕಾಂಪೌಂಡ್ ಕಾಮಗಾರಿಗೆ ಯಾವುದೇ ಅಡ್ಡಿ ಉಂಟು ಮಾಡದೆ ತೆರಳಿದ್ದು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡಿರುವ ಸುಮಾರು ಏಳು ೭ ಗ್ರಾಮಗಳ ಗ್ರಾಮಸ್ಥರು ಒಟ್ಟಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
 ಇದೆ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಹಾಸನ ಉಪವಿಭಾಗಾಧಿಕಾರಿ ಮಾರುತಿ. ತಹಶೀಲ್ದಾರ್  ಶ್ವೇತಾ. ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಷಯಗಳು: #news #peepal #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು