ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶ್ರೀ ವಿಶ್ವಕರ್ಮರು ಪ್ರಪಂಚದ ದೈವಿಕ ಇಂಜಿನಿಯರ್: ಬಿ.ವೈ.ರಾಘವೇಂದ್ರ

P

Peepal Media • ರಾಜ್ಯ

• 1 ನಿಮಿಷದ ಓದು

ಶ್ರೀ ವಿಶ್ವಕರ್ಮರು ಪ್ರಪಂಚದ ದೈವಿಕ ಇಂಜಿನಿಯರ್: ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಸೆ .17: ವಿಶ್ವಕರ್ಮರನ್ನು ಪ್ರಪಂಚದ ‘ದೈವಿಕ ಇಂಜಿನಿಯರ್’ ಎಂದು ಕರೆಯಲಾಗುತ್ತದೆ. ಅವರು ವಾಸ್ತುಶಿಲ್ಪಿಗಳ ಪ್ರಧಾನ ದೇವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಶ್ರೀ ವಿಶ್ವಕರ್ಮರನ್ನು ಕುರಿತು ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಕರ್ಮ ಜಯಂತಿ ಒಂದು ಪವಿತ್ರವಾದ ದಿನ. ಬ್ರಹ್ಮನ ಮಗನಾದ ವಿಶ್ವಕರ್ಮನು ಶಿಲ್ಪಕಲೆ, ವಾಸ್ತುಶಿಲ್ಪ ಕರಕುಶಲತೆಯನ್ನು ಜಗತ್ತಿಗೆ ನೀಡಿದವರು. ಎಷ್ಟೇ ತಾಂತ್ರಿಕತೆ ಬೆಳೆದರೂ ಕಲೆ, ಸಾಹಿತ್ಯ, ಕೌಶಲ್ಯಗಳನ್ನು ಮಷೀನ್‌ಗಳು ಸೃಷ್ಟಿಸಲು ಸಾಧ್ಯವಿಲ್ಲ.
ಪ್ರಧಾನಮಂತ್ರಿಯವರು ಕುಶಲಕರ್ಮಿಗಳ ರಕ್ಷಣೆಗಾಗಿ ಹಾಗೂ ಯುವಜನತೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲೆಂಬ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದು 8 ರಿಂದ 10 ಕೋಟಿ ಯುವ ಕುಶಲಕರ್ಮಿಗಳ ವೃತ್ತಿ ಜೀವನಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ರೈಲ್ವೇ, ವಿಮಾನ, ರಾಷ್ಟಿçÃಯ ಹೆದ್ದಾರಿಗಳು, ರಸ್ತೆಗಳು, ವಿಶ್ವವಿದ್ಯಾಲಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಯನ್ನು ಕಾಣುತ್ತಿದ್ದೇವೆ. ಮುಂದೆ ಸಹ ಜಿಲ್ಲೆಯ ಅಭಿವೃದ್ದಿಗೆ ತಾವು ಶ್ರಮಿಸುವುದಾಗಿ ಹೇಳಿದರು.
ಲಾಲ್ ಬಹದ್ದೂರ್ ಶಾಸ್ತ್ರಿ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಕಾಲೇಜಿನ ಇತಿಹಾಸ ಉಪನ್ಯಾಸಕ ನವೀನ್ ಜಿ. ಆಚಾರ್ಯ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ವಿಶ್ವಕರ್ಮರನ್ನು ನಾವು ಅನಂತ, ಅನಾದಿ ಎಂದು ಬಣ್ಣಿಸುತ್ತೇವೆ. 33 ಕೋಟಿ ದೇವರನ್ನು ಸೃಷ್ಟಿ ಮಾಡಿದವರು ವಿಶ್ವಕರ್ಮ. ದೊಡ್ಡ ದೊಡ್ಡ ಅರಮನೆಗಳು ಹಾಗೂ ಸೇತುವೆ ನಿರ್ಮಾಣಕಾರ ವಿಶ್ವಕರ್ಮ. ಖಗೋಳಶಾಸ್ತ್ರದ ಜ್ಞಾನವನ್ನೂ ಹೊಂದಿದ್ದ ವಿಶ್ವಕರ್ಮರ ಪಾಂಡಿತ್ಯ ಅಪಾರ. ಕುಶಲಕರ್ಮಿಗಳಾಗಿ ಬಹುಮುಖಿ ಸಾಧನೆಯನ್ನು ವಿಶ್ವಕರ್ಮರು ಮಾಡಿದ್ದಾರೆ ಎಂದು ತಿಳಿಸಿದ ಅವರು ಶ್ರೀ ವಿಶ್ವಕರ್ಮರ ಸೃಷ್ಟಿ ಮತ್ತು ಚರಿತ್ರೆ ಕುರಿತು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಮಾತನಾಡಿ, ವಿಶ್ವಕರ್ಮ ಧರ್ಮ, ಸಂಸ್ಕೃತಿಯ ಪ್ರತಿಬಿಂಬ ಹಾಗೂ ಶಿಲ್ಪ ಸಂಸ್ಕೃತಿ ಬೆಳೆಸಿದ ಸಮಾಜ. ವಿಶ್ವಕರ್ಮ ಸಮಾಜದವರು ಸುಸಂಸ್ಕೃತರಾಗಿದ್ದು, ಉನ್ನತ ಮಟ್ಟದ ಅಭಿವೃದ್ಧಿ ಹೊಂದಬೇಕು ಆಶಿಸಿದ ಅವರು ರಾಜ್ಯ ಸರ್ಕಾರ ಜನ ಸಾಮಾನ್ಯರು, ಬಡವರ ಆರ್ಥಿಕ ಸಬಲೀಕರಣಕ್ಕಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹರೆಲ್ಲ ಇದರ ಲಾಭ ಪಡೆಯಬೇಕು. ಇನ್ನೂ ಸೌಲಭ್ಯ ಪಡೆಯದವರು ಇದರು ಸದುಪಯೋಗ ಪಡೆಯಬೇಕೆಂದರು.
ವಿಶ್ವಕರ್ಮ ಸಮಾಜದ ಮುಖಂಡರಾದ ಎಸ್.ರಾಮು ಮಾತನಾಡಿ, ಮೊದಲು ವಿಶ್ವಕರ್ಮ ಸಮುದಾಯದವರನ್ನು ಒಗ್ಗೂಡಿಸಲು ಪೂಜಾ ಕಾರ್ಯ ಮಾಡುತಿದ್ದೆವು. ಇದೀಗ ಸರ್ಕಾರ ವಿಶ್ವಕರ್ಮ ಜಯಂತಿಯ ಆಚರಣೆ ಜಾರಿಗೆ ತಂದಿದೆ. ಹಾಗೂ ನಮ್ಮ ಪ್ರಧಾನಿಯವರು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತಂದು ಕುಶಲಕರ್ಮಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ವಿಶ್ವಕರ್ಮ ಸಮಾಜದಲ್ಲಿ 42 ಉಪ ಪಂಗಡಗಳಿದ್ದು ಎಲ್ಲರೂ ಒಗ್ಗೂಡಬೇಕೆಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಜಿಲ್ಲಾ ವಿಶ್ವ ಬ್ರಾಹ್ಮಣರ ಸಂಘದ ಅಧ್ಯಕ್ಷ ಸೋಮಾಚಾರಿ, ಸಮಾಜದ ಮುಖಂಡರಾದ ಅಗರದಹಳ್ಳಿ ನಿರಂಜನಮೂರ್ತಿ, ಶ್ರೀನಿವಾಸ್, ಹೆಚ್.ಎಂ.ಲೀಲಾ ಮೂರ್ತಿ, ರೂಪಾ ಚಂದ್ರಶೇಖರ್, ಸಮಾಜದ ಬಾಂಧವರು ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸ್ವಾಗತಿಸಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version