ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುವ ವಿದ್ವಾಂಸ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಯುವ ವಿದ್ವಾಂಸ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ

ಬೆಂಗಳೂರಿನ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನದ ವತಿಯಿಂದ ಯುವವಿದ್ವಾಂಸ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರಿಗೆ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಹೆಸರಿನ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಪ್ರತಿಷ್ಠಾನದ 33ನೇ ವಾರ್ಷಿಕೋತ್ಸವ ಹಾಗೂ ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಹೆಸರಿನ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡುವ ಮೂಲಕ ಪುರಸ್ಕರಿಸಲಾಗಿದೆ.ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕುಪ್ಪನಹಳ್ಳಿ ಗ್ರಾಮದವರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡಿ ‘ಕನ್ನಡ ಎಂ.ಎ’ ಮತ್ತು ಕನ್ನಡದ ಪ್ರಸಿದ್ಧ ವಿದ್ವಾಂಸರಾದ ಪ್ರೊ,ಕೃಷ್ಣಮೂರ್ತಿ ಹನೂರು ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಜಾನಪದ, ಶಾಸ್ತ್ರೀಯ ಕನ್ನಡ, ಅನುಭಾವ ಸಾಹಿತ್ಯ, ಬೌದ್ಧ ಸಾಹಿತ್ಯ, ಅಂಬೇಡ್ಕರ್ ಚಿಂತನೆ, ನಾಟಕ, ವಿಮರ್ಶೆ, ಅನುವಾದ, ಸಂಶೋಧನೆ ಮೊದಲಾದ ಸಾಹಿತ್ಯ ಪ್ರಕಾರಗಳಲ್ಲಿ ಆಸಕ್ತಿವುಳ್ಳವರಾಗಿದ್ದು ಈವರೆಗೆ 30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಹಿರಿಯ ವಿಮರ್ಶಕರಾದ ಡಾ.ಚಂದ್ರಶೇಖರ ವಿ.ನಂಗಲಿ ಅವರು ಗುರ್ತಿಸಿರುವಂತೆ, ‘ಇವರ ಕೃತಿಗಳಲ್ಲಿ ಮಾತೃತ್ವ-ಬುದ್ಧತ್ವ-ಕರ್ಣತ್ವ-ದಲಿತತ್ವದ ಚತುರ್ಮುಖ ಸೌಂದರ್ಯದ ದರ್ಶನವಿದೆ”.


ಬೇಲಿಗಿಡಗಳು ಮಾತಾಡುತಾವೆ, ಕರ್ಣರಸಾಯನ, ಬಸವ ಸಿನಿಮಾ ಬುದ್ಧ ಪ್ರತಿಮಾ, ಅಂತರಗಂಗವ್ವ, ನಾಟಕ-ಸಂಸ್ಕೃತಿ ದರ್ಶನ, ಬುದ್ಧನಗೆಯ ತಾಯಿನದಿ, ಬೋಧಿಯಾನ, ಶರಣಯಾನ, ಒಡಲುರಿ, ಜನಮುಖಿ, ನುಡಿಕುಲುಮೆಯ ಕಿಡಿಗನ್ನಡಿ, ನಿಚ್ಚಂಪೊಸತು, ನಿಸ್ಸೀಮ ನುಡಿಯಾನ ಮೊದಲಾದವು ಅವರ ಪ್ರಮುಖ ಕೃತಿಗಳಾಗಿವೆ. ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಫೆಲೋಷಿಫ್ ಅನುವಾದ ಯೋಜನೆಯ ಅಂಗವಾಗಿ ತೆಲುಗಿನ ಡಾ.ಬಿ.ಎಸ್.ಎಲ್.ಹನುಮಂತರಾವು ವಿರಚಿತ ‘ಆಂಧ್ರಪ್ರದೇಶದ ಜೈನ-ಬೌದ್ಧ ಧರ್ಮಗಳು’ಕೃತಿಯನ್ನು ಕನ್ನಡ ಅನುವಾದಿಸಿದ್ದಾರೆ. ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ವತಿಯಿಂದ ‘ಶಾಸ್ತ್ರೀಯ ಕನ್ನಡ ಭಾಷೆ’ ಸಂಬಂಧವಾಗಿ ಯುವ ವಿದ್ವಾಂಸರು ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ನೀಡುವ ‘ರಾಷ್ಟ್ರಪತಿ ಪ್ರಶಸ್ತಿ-೨೦೧೯ರ ಮಹರ್ಷಿ ಬಾದರಾಯಣ ವ್ಯಾಸ ಸಮ್ಮಾನ್’ ಪುರಸ್ಕಾರಕ್ಕೂ ಭಾಜನರಾಗಿದ್ದರು. ಪ್ರಸ್ತುತ ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದು, ಕನ್ನಡ ಬೋಧನೆ ಮತ್ತು ಸಂಶೋಧನೆಯಲ್ಲಿ ನಿರತರಾಗಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು