ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸಲು/ತಿದ್ದುಪಡಿ ಮಾಡಿಸಲು ಬಯಸುವವರ ಗಮನಕ್ಕೆ….

P

Peepal Media • ರಾಜ್ಯ

• 2 ನಿಮಿಷದ ಓದು

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸಲು/ತಿದ್ದುಪಡಿ ಮಾಡಿಸಲು ಬಯಸುವವರ ಗಮನಕ್ಕೆ….

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ಕೇಂದ್ರ ಚುನಾವಣಾ ಆಯೋಗ ಸಿಹಿಸುದ್ದಿ ನೀಡಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ.

ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಅರ್ಜಿ ನಮೂನೆ 6 ಮತ್ತು8 ಗಳನ್ನು ಸಲ್ಲಿಸುವಾಗ ಸ್ವಯಂಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ.

ಎಲ್ಲಾ ರೀತಿಯ ಚುಣಾವಣಾ ಸಂಬಂಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ನಲ್ಲಿ Voter Helpline application ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

20 ಆಗಸ್ಟ್ 2024 (ಮಂಗಳವಾರ) ರಿಂದ 18 ಅಕ್ಟೋಬರ್ 2024 (ಶುಕ್ರವಾರ) ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ/ಮರು ಹೊಂದಾಣಿಕೆ ಸೇರಿದಂತೆ ಮತದಾರರ ಪಟ್ಟಿ/ಮತದಾರರ ಗುರುತಿನ ಚೀಟಿಗಳಲ್ಲಿನ ಲೋಪದೋಷಗಳನ್ನು ತೆಗೆದುಹಾಕುವುದು. ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಖಾತ್ರಿಪಡಿಸುವುದು. ವಿಭಾಗ/ಭಾಗಗಳ ಮರುಹೊಂದಾಣಿಕೆ ಹಾಗೂ ಪ್ರಸ್ತಾಪಿತ ವಿಭಾಗ/ಭಾಗಗಳ ಮತಗಟ್ಟೆಗಳ ಸ್ಥಳವನ್ನು ಅಂತಿಮಗೊಳಿಸುವಿಕೆ ಮತ್ತು ಮತಗಟ್ಟೆಗಳ ಪಟ್ಟಿಗಳಿಗೆ ಅನುಮೋದನೆ ಪಡೆದುಕೊಳ್ಳುವುದು. ನ್ಯೂನತೆಗಳ ಗುರುತಿಸುವಿಕೆ ಮತ್ತು ಅಂತಹ ನ್ಯೂನತೆಗಳನ್ನು ನಿವಾರಿಸಲು ಕಾರ್ಯತಂತ್ರ ಮತ್ತು ಕಾಲಾವಧಿಯನ್ನುಅಂತಿಮಗೊಳಿಸುವುದು ಮತ್ತು ನಿಯಂತ್ರಣ ಕೋಷ್ಟಕದ(Control Table) ನವೀಕರಣ ನಡೆಯಲಿದೆ.

19 ಅಕ್ಟೋಬರ್ 2024 (ಶನಿವಾರ) ರಿಂದ 28 ಅಕ್ಟೋಬರ್ 2024 (ಸೋಮವಾರ) ರ ವರೆಗೆ ನಮೂನೆ 1 ರಿಂದ 8 ರ ತಯಾರಿ ಹಾಗೂ ಅರ್ಹತಾ ದಿನಾಂಕ 01.01.2025 ರಂತೆ ಸಮಗ್ರ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.

29.10.2024 ರಂದು (ಮಂಗಳವಾರ) ಸಮಗ್ರ ಕರಡು ಮತದಾರರ ಪಟ್ಟಿಯ ಪ್ರಕಟಣೆ, ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ 29.10.2024 (ಮಂಗಳವಾರ) ರಿಂದ 28.11.2024 (ಗುರುವಾರ) ರ ವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುತ್ತದೆ.

ಹಕ್ಕುಗಳು ಮತ್ತು ಆಕ್ಷೇಪಣೆಯ ಅವಧಿಯಲ್ಲಿ ಮುಖ್ಯ ಚುನಾವನಾಧಿಕಾರಿಗಳು ನಿಗಧಿಪಡಿಸುವ ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರದಲ್ಲಿ ಗೊತ್ತುಪಡಿಸಲಾಗುವುದು.

ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿಯನ್ನು ದಿನಾಂಕ 24.12.2024 ರೊಳಗೆ (ಮಂಗಳವಾರ) ಮುಗಿಸಲಾಗುವುದು. 01.01.2025 ರೊಳಗೆ (ಬುಧವಾರ) ಮತದಾರರ ಪಟ್ಟಿಗಳ ಗುಣಮಟ್ಟ ಪರಿಶೀಲನೆ ಮಾಡುವುದು ಹಾಗೂ ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆಯುವುದು ಮತ್ತು ದತ್ತಾಂಶವನ್ನು ನವೀಕರಿಸುವುದು ಮತ್ತು ಪೂರಕಗಳ ಮುದ್ರಣ ಮಾಡಲಾಗುವುದು. 06.01.2025 ರಂದು (ಸೋಮವಾರ) ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version