ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ವಸತಿ ಶಾಲೆ ಶಿಕ್ಷಕರ ನಿರ್ಲಕ್ಷ್ಯಕ್ಕೆ ಬಲಿಯಾದಳೇ ಬಾಲಕಿ ?

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ವಸತಿ ಶಾಲೆ ಶಿಕ್ಷಕರ ನಿರ್ಲಕ್ಷ್ಯಕ್ಕೆ ಬಲಿಯಾದಳೇ ಬಾಲಕಿ ?

ಹಾಸನ, ಮಾರ್ಚ್ 13: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕ್ಯಾತೆ ಗ್ರಾಮದ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.

ಪೂರ್ವಿಕಾ(13) ಮೃತ ಬಾಲಕಿ. ನಿನ್ನೆಯಿಂದಲೇ ತಾನು ಸುಸ್ತಾಗಿರುವುದಾಗಿ ಹೇಳಿದ್ದ ಪೂರ್ವಿಕಾ, ಇಂದು ಬೆಳಿಗ್ಗೆ ಕುಸಿದು ಬಿದ್ದಳು. ತಕ್ಷಣವೇ ಶಾಲಾ ಸಿಬ್ಬಂದಿ ಮತ್ತು ಶಿಕ್ಷಕರು ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದರು. ಆದರೆ ಆಕೆ ದಾರಿ ಮಧ್ಯೆಯೇ ಮೃತಪಟ್ಟಿದ್ದಳು.

ಪೂರ್ವಿಕಾ, ದೊಡ್ಡಬಂಡಾರ ಗ್ರಾಮದ ಶಿವ ಮತ್ತು ಆಶಾ ದಂಪತಿಯ ಪುತ್ರಿ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೋಷಕರಿಗೆ ಪೂರ್ವಿಕಾ ಆರೋಗ್ಯ ಸ್ಥಿತಿಯ ಬಗ್ಗೆ ಶಾಲಾ ಆಡಳಿತದವರು ಬೆಳಗ್ಗೆ ಮಾಹಿತಿ ನೀಡಿದ್ದರು. ಆದರೆ, ವೈದ್ಯಕೀಯ ಚಿಕಿತ್ಸೆಗೆ ಮುನ್ನವೇ ಬಾಲಕಿ ಪ್ರಾಣಬಿಟ್ಟಿದ್ದಾಳೆ.

ಈ ಘಟನೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಶವವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ. ಬಾಲಕಿಯ ಮೃತದೇಹದ ಅಂಗೈಗಳಲ್ಲಿ ಅಲ್ಲಲ್ಲಿ ರಕ್ತ ಹೆಪ್ಪುಗಟ್ಟಿದ ರೀತಿ ಕಲೆಗಳು ಕಂಡು ಬಂದಿದೆ. ಬಾಲಕಿಯ ಪಾಲಕರು ಬಂದ ನಂತರ ಮುಂದಿನ ಪ್ರಕ್ರಿಯೆ ಜರುಗಲಿದೆ. ಶಾಲಾ ಸಿಬ್ಬಂದಿ ಬಾಲಕಿಯ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸಿ ಆಕೆಯ ಸಾವಿಗೆ ಕಾರಣರಾದರೆ ಎನ್ನುವ ಪ್ರಶ್ನೆಯೂ ಮೂಡಿದೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು