ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ, ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ, ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮೇ 10- ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.

ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲಗಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇಟ್ಟಿರಬೇಕಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಂಬಬೇಕಲ್ಲವೆ ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಯಾರೂ ಭಾಗಿಯಾಗಿಲ್ಲ ಎಂದು ಸ್ಪಷ್ಟ ಪಡಿಸಿದ ಮುಖ್ಯಮಂತ್ರಿಗಳು, ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ತಿಳಿಸಿದರು.

ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ
ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು