ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

RSS ಮತ್ತು BJP ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

RSS ಮತ್ತು BJP ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು ಏ14: RSS ಮತ್ತು BJP ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಸೈದ್ದಾಂತಿಕ‌ ಹೋರಾಟವನ್ನು ನಾವು ನೀವೆಲ್ಲಾ ಮುನ್ನಡೆಸಬೇಕು ಎಂದು ಸಿಎಂ ಕರೆ ನೀಡಿದರು.

ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದನ್ನು, ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು ಎಂದರು.

ಮನುಸ್ಮೃತಿ ಮತ್ತು ಜಾತಿ ವ್ಯವಸ್ಥೆ ಕಾರಣದಿಂದ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾಗಿದ್ದ ಎಲ್ಲಾ ಜಾತಿ, ಸಮುದಾಯಗಳನ್ನು ದೌರ್ಜನ್ಯಮುಕ್ತಗೊಳಿಸಲು ಅಂಬೇಡ್ಕರ್ ಅವರ ಬದುಕು ಮುಡಿಪಾಗಿತ್ತು ಎಂದರು.

ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಸಭೆಯಲ್ಲಿ, “ಸಂವಿಧಾನ ಜಾರಿಯ ಈ ದಿನದಿಂದ ನಾವು ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಅಸಮಾನತೆ ಇರುವ ಸಮಾಜಕ್ಕೆ ಪ್ರವೇಶ ಪಡೆಯುತ್ತಿದ್ದೇವೆ. ಈ ಅಸಮಾನತೆ ಹೋಗದೆ ಸಂವಿಧಾನದ ಆಶಯಗಳು ಈಡೇರಲು ಸಾಧ್ಯವಿಲ್ಲ ಎಂದಿದ್ದರು. ಸಂವಿಧಾನದ ಕಾರಣದಿಂದ ಶಿಕ್ಷಣದಿಂದ ವಂಚಿತರಾಗಿದ್ದ ನೂರಾರು ಜಾತಿ, ಸಮುದಾಯಗಳಿಗೆ ಶಿಕ್ಷಣ ದೊರೆಯುವಂತಾಯಿತು ಎಂದರು.

ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗಾಗಿ, ಅಸ್ಪೃಶ್ಯತೆ ಹೋಗಲಾಡಿಸುವುದಕ್ಕಾಗಿ ತಾನು ಶಿಕ್ಷಣ ಪಡೆದದ್ದಾಗಿ ಅಂಬೇಡ್ಕರ್ ಹೇಳಿದ ಮಾತನ್ನು ಉಲ್ಲೇಖಿಸಿದರು.

1952 ರ ಜನವರಿ 18 ರಂದು ಅಂಬೇಡ್ಕರ್ ಅವರು ತಮ್ಮ ಕೈಯಾರೆ ತಮ್ಮದೇ ಹಸ್ತಾಕ್ಷರದಲ್ಲಿ ಒಂದು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಆದರೂ ಬಿಜೆಪಿಯವರು ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಸುಳ್ಳು ಹೇಳುತ್ತಾ ಮನುವಾದಿಗಳು, ಬಿಜೆಪಿಯವರು ತಿರುಗುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಸತ್ಯವನ್ನು ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.‌

ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಸಮಾನವಾಗಿ ಕಾಣುವ ಎಲ್ಲರ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸಿ , ಜಾರಿ ಮಾಡಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ವಿವರಿಸಿದರು.

ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನಮಗೆ ನೀಡಿದ ಅಂಬೇಡ್ಕರ್ ನಮ್ಮವರು, ಇವರು ನಮಗೆ ಬೇಕು ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು