ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಗೆ ಸ್ವಾಗತ: ಪಕ್ಷ ಘೋಷಿಸಿದ ಅಭ್ಯರ್ಥಿಗೆ ಬೆಂಬಲ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಗೆ ಸ್ವಾಗತ: ಪಕ್ಷ ಘೋಷಿಸಿದ ಅಭ್ಯರ್ಥಿಗೆ ಬೆಂಬಲ

ಕುಂದಾಪುರ: ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ತತ್ವದ ಮೇಲೆ ನಂಬಿಕೆ ಇಟ್ಟು ಯಾರೇ ಆದರೂ ಪಕ್ಷವನ್ಮು ಸೇರುವುದಾದರೆ ಅವರನ್ನು ಪಕ್ಷ ಸ್ವಾಗತಿಸುವುದಾಗಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹಾಗೂ ಪಕ್ಷದ ಹಿರಿಯ ಮುಖಂಡರು ಹೇಳಿದ್ದು, ಪಕ್ಷದ ಮುಖಂಡರ ನಿಲುವಿಗೆ ನಮ್ಮ‌ ಸಹಮತ ಇರುವುದಾಗಿ ಮಾಜಿ‌ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಮ್. ದಿ‌ನೇಶ್ ಹೆಗ್ಡೆ ಮೊಳಹಳ್ಳಿ ಮುಂತಾದವರು ಜಂಟಿ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

ಮಾಜಿ‌ ಸಂಸದರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆಯವರು ಮರಳಿ ಕಾಗ್ರೆಸ್ ಪಕ್ಷ‌ ಸೇರ್ಪಡೆಯಾಗುವ ಕುರಿತು ಈಗಾಗಲೇ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿರುವ ಬಗ್ಗೆ ಮಾಹಿತಿಗಳಿದ್ದು, ಹಿಂದೆ ಕಾಂಗ್ರೆಸ್ ಪಕ್ಷದ ಸಂಸದರಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ‌ ವಿಶ್ವಾಸವನ್ನು ಗಳಿಸಿಕೊಂಡಿದ್ದ ಅವರು, ಮರಳಿ ಕಾಂಗ್ರೆಸ್‌ ಪಕ್ಷವನ್ನು ಸೇರುವುದಿದ್ದಲ್ಲಿ ನಾವು ಸ್ವಾಗತಿಸುತ್ತೇವೆ.

ಕಾಂಗ್ರೆಸ್ ಪಕ್ಷದೊಂದಿಗೆ ಅಪರಿಮಿತ ಸಂಬಂಧಗಳನ್ನು‌ ಹೊಂದಿರುವ ಚಿಕ್ಕಮಗಳೂರ-ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಹೈಕಮಾಂಡ್ ಯಾರೇ ಅಭ್ಯರ್ಥಿಗಳನ್ನು‌ ಘೋಷಣೆ ಮಾಡಿದರೂ ಪಕ್ಷದ ನಿಷ್ಠಾವಂತ‌ ಕಾರ್ಯಕರ್ತರುಗಳಾದ ನಾವುಗಳು ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಜಿಲ್ಲಾ‌ ಕಾಂಗ್ರೆಸ್ ಸಮಿತಿಯ ವಕ್ತಾರ ಕೆ. ವಿಕಾಸ್ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸರಸು ಡಿ ಬಂಗೇರ, ಜ್ಯೋತಿ ವಿ ಪುತ್ರನ್, ರಾಜ್ಯ ಐಟಿ ಸೆಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ದೇವಾನಂದ ಶೆಟ್ಟಿ ಹಳ್ನಾಡು, ರಮೇಶ್ ಗಾಣಿಗ ಕೊಲ್ಲೂರು, ಮದನ್ ಕುಮಾರ್ ಉಪ್ಪುಂದ, ವಿಜಯಾಧರ ಪೂಜಾರಿ, ಪುರಸಭಾ ಸದಸ್ಯ ಅಬು ಮಹಮ್ಮದ್, ಎಮ್ಎಸ್ಯುಐ ಮುಖಂಡ ಸುಜನ್ ಶೆಟ್ಟಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು