ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ, ಅಂತಹ ಸಮಯ ಬಂದರೆ ಮುಲಾಜಿಲ್ಲದೆ ಬಂಧಿಸ್ತೀವಿ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ, ಅಂತಹ ಸಮಯ ಬಂದರೆ ಮುಲಾಜಿಲ್ಲದೆ ಬಂಧಿಸ್ತೀವಿ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೊಪ್ಪಳ, ಆಗಸ್ಟ್ 21: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು