ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾವು ಸರ್ವಪಕ್ಷ ಸಭೆಯಲ್ಲಿ ಧ್ವನಿ ಎತ್ತುತ್ತೇವೆ – ವಿ. ಸೋಮಣ್ಣ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ನಾವು ಸರ್ವಪಕ್ಷ ಸಭೆಯಲ್ಲಿ ಧ್ವನಿ ಎತ್ತುತ್ತೇವೆ – ವಿ. ಸೋಮಣ್ಣ

ತುಮಕೂರು : ಕಾವೇರಿ ನೀರಿನ (Cauvery dispute) ಹಂಚಿಕೆ ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಮುಖ್ಯಮಂತ್ರಿಗಳು ಕರೆದಿರುವ ಸರ್ವಪಕ್ಷ ಸಭೆಯಲ್ಲಿ (All party meeting) ತಾವು ಭಾಗವಹಿಸಿ ರಾಜ್ಯದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಹೇಳಿದ್ದಾರೆ. ಹಲವು ದಶಕಗಳಿಂದ ಮುಂದುವರಿದಿರುವ ಈ ವಿವಾದವನ್ನು ಹಿಂದಿನ ಹಲವು ಸರ್ಕಾರಗಳು ಪರಿಹರಿಸಲು ಪ್ರಯತ್ನಿಸಿದ್ದರೂ ಸಂಪೂರ್ಣ ಯಶಸ್ಸು ಸಿಕ್ಕಿಲ್ಲ ಎಂದು ಇದೇ ವೇಳೆ ನೆನಪಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಕುಡಿಯುವ ನೀರಿನ ಕೊರತೆಯಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಭೆಯ ಚರ್ಚೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ಕೇಂದ್ರ ಸಚಿವರಾಗಿದ್ದರೂ ಕರ್ನಾಟಕದ ಹಿತವೇ ತಮ್ಮ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದರು.ಇನ್ನು ಮೇಕೆದಾಟು ಯೋಜನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿದ್ದು, ಡಿಪಿಆರ್‌ನಲ್ಲಿದ್ದ ಕೆಲವು ಕೊರತೆಗಳನ್ನು ಸರಿಪಡಿಸುವಂತೆ ಸೂಚಿಸಲಾಗಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ದೇಶದ ಹಲವು ನದಿ ನೀರಿನ ವಿವಾದಗಳನ್ನು ಬಗೆಹರಿಸಿರುವಂತೆ ಕಾವೇರಿ ಸಮಸ್ಯೆಯೂ ಪರಿಹಾರವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸೋಮಣ್ಣ, ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದು, ಆಗಸ್ಟ್ 13ರ ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯಿಸಿ, ಮಳೆಯಾದರೆ ಅನೇಕ ಸಮಸ್ಯೆಗಳಿಗೆ ಸಹಜ ಪರಿಹಾರ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ವಿಷಯಗಳು: #karnataka #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು