ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಶ್ವವಿದ್ಯಾಲಯಗಳು ಬರಿಯ ಮೂಢ ನಂಬಿಕೆಯಿಂದ ಕೂಡಿದ ಪ್ರಜೆಗಳನ್ನು ಸೃಷ್ಟಿಸುವುದರಿಂದ ಏನು ಪ್ರಯೋಜನ?: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ವಿಶ್ವವಿದ್ಯಾಲಯಗಳು ಬರಿಯ ಮೂಢ ನಂಬಿಕೆಯಿಂದ ಕೂಡಿದ ಪ್ರಜೆಗಳನ್ನು ಸೃಷ್ಟಿಸುವುದರಿಂದ ಏನು ಪ್ರಯೋಜನ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವೈಜ್ಞಾನಿಕ ಮನೋಭಾವ, ವೈಚಾರಿಕ ಚಿಂತನೆಯಿಲ್ಲದ, ಅಜ್ಞಾನ ತುಂಬಿದ ಪದವೀಧರರು ವಿಶ್ವವಿದ್ಯಾಲಯದಿಂದ ಹೊರಬರುವುದರಿಂದ ಏನು ಪ್ರಯೋಜನ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅಂತವರಿಂದ ದೇಶಕ್ಕೆ ಮತ್ತು ರಾಜ್ಯಕ್ಕೆ ಮತ್ತು ಸಮಾಜಕ್ಕೆ ಏನೂ ಉಪಯೋಗವಿಲ್ಲ. ಪದವೀಧರರನ್ನು ವೈಜ್ಞಾನಿಕ ಮನೋಭಾವ ಹೊಂದಿರುವ ವ್ಯಕ್ತಿಗಳಾಗಿ ತಯಾರಿಸಬೇಕು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ವಿಶ್ವವಿದ್ಯಾನಿಲಯಗಳು ದೇಶವನ್ನು ವೈಜ್ಞಾನಿಕವಾಗಿ, ಬೌದ್ಧಿಕವಾಗಿ, ಆರ್ಥಿಕವಾಗಿ ಮತ್ತು ಸುಸಂಸ್ಕೃತ ರೀತಿಯಲ್ಲಿ ಮುನ್ನಡೆಸುವ ಪದವೀಧರರನ್ನು ಸಜ್ಜುಗೊಳಿಸಬೇಕು. ಅಜ್ಞಾನ ತುಂಬಿಕೊಂಡು ಹೊರಬಂದರೆ ದೇಶಕ್ಕಾಗಲಿ ರಾಜ್ಯಕ್ಕಾಗಲಿ ಅಥವಾ ಅವರ ಭವಿಷ್ಯಕ್ಕಾಗಲಿ ಉಪಯೋಗವಾಗುವುದಿಲ್ಲ ಎಂದರು.

ಸರ್ಕಾರಿ ಕಾಲೇಜುಗಳು, ಖಾಸಗಿ ಕಾಲೇಜುಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಜಿಇಆರ್ ಅನುಪಾತವನ್ನು ಯುಯುಸಿಎಂಎಸ್‌ನಲ್ಲಿ ದಾಖಲಿಸಲಾಗುವುದು, ಮಾಹಿತಿ ಸಿದ್ಧವಾಗಿರಬೇಕು ಎಂದು ಈ ಸಂದರ್ಭದಲ್ಲಿ ಸೂಚಿಸಿದರು.

ಜಿಇಆರ್ ದರ ಕಡಿಮೆ ಇರುವ ಚಾಮರಾಜನಗರ, ಯಾದಗಿರಿ, ಹಾಸನ, ಕೊಪ್ಪಳ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಅನುಪಾತ ಹೆಚ್ಚಿಸಲು ಮತ್ತು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಅಗತ್ಯ ಕ್ರಮಗಳು ಮತ್ತು ಸಂಶೋಧನೆಗೆ ಮುಂದಾಗುವಂತೆ ಮುಖ್ಯಮಂತ್ರಿ ಸೂಚಿಸಿದರು. ರಾಜ್ಯದ ಅತ್ಯಂತ ಹಳೆಯ ಹಾಗೂ ಮೊದಲ ವಿವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು