ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಜನಗಳ ಪ್ರತಿನಿಧಿಯಾಗಿ ಲೋಕಸಭೆಯಲ್ಲಿ ಮಾತನಾಡದಿದ್ದರೆ ಅಲ್ಲಿಗೆ ಯಾಕೆ ಹೋಗಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಜನಗಳ ಪ್ರತಿನಿಧಿಯಾಗಿ ಲೋಕಸಭೆಯಲ್ಲಿ ಮಾತನಾಡದಿದ್ದರೆ ಅಲ್ಲಿಗೆ ಯಾಕೆ ಹೋಗಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಹಾಸನ(ಸಕಲೇಶಪುರ) ಏಪ್ರಿಲ್ 19:. ಜಂತರ್ ಮಂತರ್ ಬಳಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಭಟನೆಯಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟರೇ? ಜನಗಳ ಪ್ರತಿನಿಧಿಯಾಗಿ ಲೊಕಸಭೆಯಲ್ಲಿ ಮಾತನಾಡದಿದ್ದರೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ಇಂದು ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ಪ್ರಜಾಧ್ವನಿ-02 ಲೋಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಜ್ವಲ್ ರೇವಣ್ಣ 5 ವರ್ಷ ಸಂಸದರಾಗಿ ಏನಾದರೂ ಮಾಡಿದ್ದಾರೆಯೇ? ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಪಾಲು ನೀಡದೆ ಅನ್ಯಾಯ ಮಾಡಿದಾಗಲೂ ಏನೂ ಮಾತನಾಡಲಿಲ್ಲ. ಕರ್ನಾಟಕದಿಂದ ಕೇಂದ್ರಕ್ಕೆ ಕೊಡುವ ತೆರಿಗೆ 4.30 ಲಕ್ಷ ಕೋಟಿ ರೂ.ಗಳು. ನಮಗೆ ವಾಪಸ್ಸು ಬರುವುದು 55 ಕೋಟಿ ರೂ.ಗಳು ಮಾತ್ರ. ಇದು ಅನ್ಯಾಯವಲ್ಲವೇ? ಎಂದರು.

ಕೇಂದ್ರದ ಮಲತಾಯಿ ಧೋರಣೆ
ಬಿಜೆಪಿಯಿಂದ 25 ಜನ ಸಂಸದರಾಗಿದ್ದರು. ಈಗ 27 ಜನರಾಗಿದ್ದಾರೆ. ಇವರು ಯಾರು ಬಾಯಿ ಬಿಡಲಿಲ್ಲ. ನೀರಾವರಿ, ಬರಗಾಲಕ್ಕೆ ಹಣ ಬಿಡುಗಡೆ ಮಾಡಲಿಲ್ಲ. ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಕೊಟ್ಟು ಆರು ತಿಂಗಳಾದರೂ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಬಂದಾಗ ಮಾತ್ರ. ಬರಗಾಲ, ಪ್ರವಾಹ ಬಂದಾಗ ಬರಲಿಲ್ಲ. ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಈ ಬಗ್ಗೆ ನಿಮಗೆ ಕೋಪ ಬಂದಿದ್ದರೆ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನ ಮಾಡಲೇಬೇಕು ಎಂದರು.

ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು

10 ವರ್ಷಗಳಲ್ಲಿ ನರೇಂದ್ರ ಮೋದಿಯವರು ರೈತರು ಬಡವರಿಗೆ ಯಾವ ಕಾರ್ಯಕ್ರಮವನ್ನೂ ಹಮ್ಮಿಕೊಂಡಿಲ್ಲ ಹಾಗೂ ನುಡಿದಂತೆ ನಡೆದುಕೊಂಡಿಲ್ಲ. ಸಾಮಾಜಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸವನ್ನೂ ಮಾಡಿಲ್ಲ ಎಂದರು.

ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ. ವಾಚಾಮಗೋಚರವಾಗಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದ ದೇವೇಗೌಡರು ಈಗ ಅವಿನಾಭಾವ ಸಂಬಂಧವಿದೆ ಎನ್ನುತ್ತಿದ್ದಾರೆ. ಈ ಅನಿರೀಕ್ಷಿತ ಪ್ರೀತಿಯ ಬಗ್ಗೆ ಜನ ವಿಚಾರ ಮಾಡಬೇಕು. ಸ್ವಾರ್ಥಕ್ಕಾಗಿ, ಕುಟುಂಬ ರಾಜಕಾರಣಕ್ಕಾಗಿ ಈಗ ನರೇಂದ್ರ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಬಡವರ ಕಷ್ಟ ಸುಖ, ಸಾಮಾನ್ಯ ಜನರ, ರೈತರಿಗಾಗಿ ಸೇರಿಲ್ಲ. ಕೇವಲ ಸ್ವಾರ್ಥಕ್ಕಾಗಿ ಸೇರಿಕೊಂಡಿದ್ದಾರೆ.

ಅಳಿಯ, ಮಗ, ಮೊಮ್ಮಗನನ್ನು ನಿಲ್ಲಿಸಿದ್ದಾರೆ. ಕೋಲಾರ ಮೀಸಲು ಸ್ಥಾನವಾಗಿರುವುದರಿಂದ ಬಿಟ್ಟಿದ್ದಾರೆ ಅಷ್ಟೇ ಎಂದರು.

ಎತ್ತಿನಹೊಳೆ ಯೋಜನೆಯನ್ನು ಹೆಚ್.ಡಿ ಕುಮಾರಸ್ವಾಮಿ ವಿರೋಧಿಸಿದ್ದರು. ಜನರ ದಾರಿ ತಪ್ಪಿಸಿ ಅಧಿಕಾರ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದರು.

ಈ ಬಾರಿ ಮೋದಿ ಅಲೆ ಇಲ್ಲ.

ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ. ಈ ಬಾರಿ ಮೋದಿ ಅಲೆ ಇಲ್ಲ. ಅವರು ಕೊಟ್ಟ ಮಾತುಗಳಂತೆ ನಡೆದುಕೊಂಡಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಈವರಗೆ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ ಮಾಡಲಿಲ್ಲ. ಎಂಬಿಬಿಎಸ್, ಇಂಜಿನಿಯರಿಂಗ್ ಮಾಡಿ ಪಕೋಡಾ ಮಾಡಲು ಹೋಗಬೇಕೇ? ಯುವ ಸಮೂಹ ನರೇಂದ್ರ ಮೋದಿ ಅಸಾಧ್ಯ ಸುಳ್ಳು ಹೇಳುತ್ತಾರೆಂದು ಅರ್ಥ ಮಾಡಿಕೊಂಡಿದೆ. ನಾವು ನಿರುದ್ಯೋಗಿ ಯುವಕರಿಗೆ ಯುವನಿಧಿ ಜಾರಿ ಮಾಡಿದ್ದೇವೆ. ಹಿಂದೆ ಸಿಎಂ ಆಗಿದ್ದಾಗ ಪ್ರತಿ ಕಾರ್ಡುದಾರರಿಗೆ 7 ಕೆಜಿ ಅಕ್ಕಿಯನ್ನು ಕೊಡುತ್ತಿದ್ದೆವು. 7 ಕೆಜಿಯಿಂದ 5 ಕೆಜಿಗೆ ಬಿ.ಎಸ್ ಯಡಿಯೂರಪ್ಪ ಇಳಿಸಿದರು. ಬಡವರ ಹೊಟ್ಟೆಯ ಮೇಲೆ ಹೊಡೆಯಬೇಡಿ ಎಂದಾಗಲೂ ಅವರು ಒಪ್ಪಲಿಲ್ಲ. ಹೆಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಕೇಳಲಿಲ್ಲ. ಅದಕ್ಕಾಗಿ 5 ಗ್ಯಾರಂಟಿಗಳಲ್ಲಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಆದರೆ ಕೇಂದ್ರ ಸರ್ಕಾರದ ರಾಜಕೀಯದಿಂದಾಗಿ ಅಕ್ಕಿ ಕೊಡದೇ ಹೋದರು. ನರೇಂದ್ರ ಮೋದಿಯವರಿಂದ ಅಕ್ಕಿ ಕೊಡಬಾರದು ಎಂದು ಆದೇಶವಿದೆ ಎಂದು ಅಧಿಕಾರಿಗಳು ತಿಳಿಸಿದರು. ಗೃಹ ಜ್ಯೋತಿ ಮೂಲಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಓಡಾಡುತ್ತಿದ್ದಾರೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ನೀವೇ ತೀರ್ಮಾನ ಮಾಡಬೇಕು ಎಂದರು.

ಹೊಸಬರಿಗೆ ಅವಕಾಶ ನೀಡಿ
ಈ ಚುನಾವಣೆಯಲ್ಲಿ ಹೊಸಬರಿಗೆ ಅಂದರೆ ಕಾಂಗ್ರೆಸ್ ಅಭ್ಯರ್ಥಿಗೆ ಅವಕಾಶ ನೀಡಬೇಕು. ಕೊಟ್ಟ ಮಾತು ಈಡೇರಿಸಿದ್ದೇವೆ. ಬಸವಾದಿ ಶರಣರ ಹಾದಿಲ್ಲಿ ನಡೆಯುವ ಕೆಲಸವನ್ನು ಮಾಡುತ್ತಿದ್ದು, ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಕೆಂಪೇಗೌಡರ ಜಯಂತಿಯನ್ನು ಆಚರಣೆಗೆ ತೀರ್ಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ ಎಂದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು