ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಂದು ವರ್ಷದೊಳಗೆ ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಟ್ ಗೇಟ್ ಗಳ ಅಳವಡಿಕೆಗೆ ಕ್ರಮ: ಡಿಸಿಎಂ ಡಿ. ಕೆ. ಶಿವಕುಮಾರ್

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಒಂದು ವರ್ಷದೊಳಗೆ ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಟ್ ಗೇಟ್ ಗಳ ಅಳವಡಿಕೆಗೆ ಕ್ರಮ: ಡಿಸಿಎಂ ಡಿ. ಕೆ. ಶಿವಕುಮಾರ್

ಹೊಸಪೇಟೆ/ ಮುನಿರಾಬಾದ್, ಸೆ. 22: “ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರೆಸ್ಟ್ ಗೇಟ್ ಗಳನ್ನು ಒಂದು ವರ್ಷದೊಳಗೆ ಅಳವಡಿಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಬಳಿ ಚರ್ಚೆ ನಡೆಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು. ಇದರ ಮೂಲಕ ನಮ್ಮ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು” ಎಂದು ಹೇಳಿದರು.

ಆಗಸ್ಟ್ 10 ನೇ ತಾರೀಕಿನಂದು 19ನೇ ಗೇಟ್ ಕಿತ್ತು ಹೋದಾಗ ಜಿಲ್ಲಾ ಮಂತ್ರಿಗಳು, ಎಂಡಿಯವರು ಕರೆ ಮಾಡಿ ಡ್ಯಾಮ್ ಅಪಾಯದಲ್ಲಿದೆ ಎಂದು ಪರಿಸ್ಥಿತಿಯ ಬಗ್ಗೆ ತಿಳಿಸಿದರು. ನಾನು ಆತಂಕ ಪಡಬೇಡಿ ಎಂದು ಹೇಳಿ ಮಾರನೇ ದಿನವೇ ಸ್ಥಳಕ್ಕೆ ಭೇಟಿ ನೀಡಿದೆ. ಅಧಿಕಾರಿಗಳು ಹಾಗೂ ತಾಂತ್ರಿಕ ಪರಿಣಿತರ ಹತ್ತಿರ ಮಾತನಾಡಿ ಎಲ್ಲಾ ಗೇಟ್ ಗಳಿಂದ ನೀರನ್ನು ಹರಿಸಿ ಎಂದು ಹೇಳಿ ತಕ್ಷಣ ಗೇಟ್ ತಯಾರು ಮಾಡುವ ಸಂಸ್ಥೆಗಳ ಜೊತೆ ಚರ್ಚೆ ನಡೆಸಿ ಗೇಟ್ ತಯಾರಿಗೆ ಆದೇಶ ನೀಡಿದೆ” ಎಂದರು.

“ಡ್ಯಾಮಿನ ಗೇಟ್ ಕಿತ್ತು ಹೋದಂತಹ ಕಷ್ಟಕಾಲದಲ್ಲಿ ನಾವು ಎದೆಗುಂದದೆ ರೈತರ ಜಮೀನಿಗೆ ಮತ್ತೆ ನೀರನ್ನು ಕೊಡುವಂತಹ ಅವಕಾಶ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ನಮ್ಮ ಭಾಗ್ಯ” ಎಂದರು.

ಕನ್ನಯ್ಯ ಅವರನ್ನು ಹೊಗಳಿದ ಡಿಸಿಎಂ

“ಕಷ್ಟಕಾಲದಲ್ಲಿ ಕನ್ನಯ್ಯ ನಾಯ್ಡು ಅವರು ನಮ್ಮ ಜೊತೆ ನಿಂತು, 20 ಟಿಎಂಸಿಯಷ್ಟು ನೀರು ಉಳಿಸಿದರು. 9 ಲಕ್ಷ ಎಕರೆಗೆ ಬೆಳೆ ಹಾಗೂ ನಮ್ಮ ರೈತರನ್ನು ಉಳಿಸಿದ ಹಿರಿಯ ಜೀವ” ಎಂದು ಹೇಳಿದರು.

“ನಾರಾಯಣ ಇಂಜಿನಿಯರಿಂಗ್, ಜಿಂದಾಲ್ ಹಾಗೂ ಹಿಂದೂಸ್ತಾನ್ ಇಂಜಿನಿಯರಿಂಗ್ ಅವರು ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ ಬಹು ದೊಡ್ಡ ಕೆಲಸ ಮಾಡಿದ್ದಾರೆ. ಇಲಾಖೆಯ ಅಧಿಕಾರಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ಇಡೀ ಭಾರತವೇ ತಿರುಗಿ ನೋಡುವಂತಹ ಕೆಲಸವನ್ನು ನಾವು ಮಾಡಿದ್ದೇವೆ. ಗೇಟ್ ಕಿತ್ತು ಹೋದಾಗ ಆಂಧ್ರ, ತೆಲಂಗಾಣದ ರೈತರು ಆತಂಕದಲ್ಲಿದ್ದರು. ಎಲ್ಲರ ಭಯವನ್ನು ನಾವು ಗೇಟ್ ಮರು ಜೋಡಿಸುವುದರ ಮೂಲಕ ದೂರ ಮಾಡಿದ್ದೇವೆ” ಎಂದರು.

ನವಲಿ ಆಣೆಕಟ್ಟು ನಿರ್ಮಾಣಕ್ಕೆ ಶೀಘ್ರ ಕ್ರಮ

“ನಾವು ಉದ್ಘಾಟನೆ ವೇಳೆ ಗಿಡಕ್ಕೆ ನೀರು ಹಾಕಿದೆವು. ಇದು ರಾಜ್ಯದ ಜನರ ಹಾಗೂ ರೈತರ ಬದುಕನ್ನು ಹಸನು ಮಾಡಲು ಹಾಕಿದ ನೀರು. ನಮ್ಮ ಕರ್ನಾಟಕದ ಪಾಲಿನ ನೀರನ್ನು ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ. ನವಲಿಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಾವು ಮುಂದಾಗುತ್ತೇವೆ. ಈ ಅಣೆಕಟ್ಟು ನಿರ್ಮಾಣಕ್ಕೆ ಈಗಾಗಲೇ ಡಿಪಿಆರ್ ತಯಾರಿಸಿದ್ದೇವೆ. ಸುಮಾರು ಹದಿನೈದು ಸಾವಿರ ಎಕರೆ ಭೂಮಿ ಇದಕ್ಕೆ ಬೇಕಾಗಿದೆ. ಈ ಕುರಿತು ನೆರೆಯ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ” ಎಂದು ಹೇಳಿದರು.

“ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿಕೊಂಡ ಕಾರಣಕ್ಕೆ ಸುಮಾರು 33 ಟಿಎಂಸಿಯಷ್ಟು ನಮ್ಮ ಪಾಲಿನ ನೀರು ಸಿಗುತ್ತಿಲ್ಲ. ಇದಕ್ಕೆಲ್ಲ ಪರಿಹಾರ ನವಲಿ ಅಣೆಕಟ್ಟು. ನಿರ್ಮಾಣಕ್ಕೆ ನೆರೆಯ ರಾಜ್ಯಗಳ ಸಹಕಾರವನ್ನು ಕೇಳಲಾಗುವುದು” ಎಂದು ತಿಳಿಸಿದರು.

ಗಂಗಾ ಸ್ನಾನ, ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾ ನೀರು ಕುಡಿಯಲು ಅಷ್ಟು ಪವಿತ್ರವಾದುದು. ಶೃಂಗೇರಿಯ ಶಾರದಾಂಬೆಯ ಪಾದ ಮುಟ್ಟಿ ಹರಿಯು ತುಂಗಾ ನದಿ ನಮ್ಮನ್ನು ಕಾಪಾಡಿದ್ದಾಳೆ. ಹಂಪಿಯ ವಿರೂಪಾಕ್ಷನ ಆಶೀರ್ವಾದದಿಂದ ಪ್ರಕೃತಿ ಮಾತೆಯ ಆಶೀರ್ವಾದದಿಂದ ಮತ್ತೆ ಅಣೆಕಟ್ಟು ತುಂಬಿದೆ” ಎಂದರು.

“ತುಂಗಭದ್ರಾ ಅಣೆಕಟ್ಟು ಕಾಂಗ್ರೆಸ್ ಪಕ್ಷದ ಕೊಡುಗೆ. ಈ ಇತಿಹಾಸವನ್ನು ಯಾರಿಂದಲೂ ತಿರುಚಲು ಸಾಧ್ಯವಿಲ್ಲ. ಆಧುನಿಕ ಭಾರತದ ದೇವಾಲಯಗಳು ಆಣೆಕಟ್ಟುಗಳು ಎಂದು ನೆಹರು ಅವರು ಹೇಳಿದ್ದರು. ರೈತರನ್ನು ಕಾಪಾಡುವುದೇ ಅಣೆಕಟ್ಟುಗಳು” ಎಂದು ಹೇಳಿದರು.

“ನಾನು ಈ ಹಿಂದೆ ತುಂಗಾ ಆರತಿ ಆರಂಭ ಮಾಡಿದ್ದೆ. ಈಗ ಕಾವೇರಿ ಆರತಿಗೆ ತೀರ್ಮಾನ ಮಾಡಿದ್ದೇವೆ. ಅದಕ್ಕೆ ಒಂದು ತಂಡವನ್ನು ರಚನೆ ಮಾಡಲಾಗಿದೆ. ಈಗಾಗಲೇ ಹರಿದ್ವಾರಾ, ಕಾಶಿ ಸೇರಿದಂತೆ ಇತರೇ ಕಡೆ ಅಧ್ಯಯನ ಮಾಡುತ್ತಿದೆ” ಎಂದು ಹೇಳಿದರು.

ಟೀಕೆಗಳು ಸತ್ತಿವೆ, ಕೆಲಸಗಳು ಉಳಿದಿವೆ

“ಗೇಟ್ ಕಿತ್ತು ಹೋದಾಗ ವಿರೋಧ ಪಕ್ಷಗಳು ಟೀಕೆ ಮಾಡಿದವು. ನಾನು ಹಾಗೂ ಸಿದ್ದರಾಮಯ್ಯ ಅವರು ವಿರೋಧಿಗಳ ಟೀಕೆಗಳಿಗೆ ಎದೆಗುಂದಲಿಲ್ಲ. ಸರ್ಕಾರದ ಸಚಿವರ ಹಾಗೂ ಶಾಸಕರ ಬೆಂಬಲದಿಂದ, ನಾವು ಮಾಡಿದ ಕೆಲಸದಿಂದ ಟೀಕೆಗಳು ಸತ್ತಿವೆ, ಕೆಲಸಗಳು ಉಳಿದಿವೆ” ಎಂದರು.

“ಜನ ಬದಲಾವಣೆ ಆಗಬಹುದು, ಜಗತ್ತು ಬದಲಾವಣೆ ಆಗಬಹುದು ಆದರೆ ನಾವು ಮಾಡಿರುವ ಸಾಧನೆಗಳು ಎಂದಿಗೂ ಶಾಶ್ವತ. ಆಣೆಕಟ್ಟು ಉಳಿಸಲು ಹಗಲು, ರಾತ್ರಿ ಕಷ್ಟಪಟ್ಟ ಕಾರ್ಮಿಕರ ಶ್ರಮದಲ್ಲಿ ನಾವು ಯಶಸ್ಸನ್ನು ಕಾಣುತ್ತಿದ್ದೇವೆ” ಎಂದು ಹೇಳಿದರು.

“ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂಬುದಕ್ಕೆ ನಿಮ್ಮ ಕಣ್ಣುಗಳೇ ಸಾಕ್ಷಿ. ಗ್ಯಾರಂಟಿ ಯೋಜನೆಗ ಮೂಲಕ ನಾಡಿನ ಪ್ರತಿಯೊಂದು ಕುಟುಂಬವು ಸಮೃದ್ಧಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಕಾಂಗ್ರೆಸ್ ಸರ್ಕಾರ ಚಿರಋಣಿಯಾಗಿರುತ್ತದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಮ್ಮ ಕೈ ಹಿಡಿದಿದ್ದೀರಿ. ಇದಕ್ಕಾಗಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇವೆ” ಎಂದರು.

“ಯಾವುದೇ ಕಾರಣಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಂದೆ 10 ವರ್ಷಗಳ ಕಾಲ ನಾವೇ ಬಾಗಿನ ಅರ್ಪಿಸುತ್ತೇವೆ. ಈ ವರ್ಷ ಉತ್ತಮ ಮಳೆ ಬಂದು ನಾನು ಮತ್ತು ಸಿದ್ದರಾಮಯ್ಯ ಅವರು ಪ್ರಮುಖ ನಾಲ್ಕು ಅಣೆಕಟ್ಟುಗಳಿಗೆ ಬಾಗಿನ ಅರ್ಪಿಸಿದ್ದೇವೆ. ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ” ಎಂದು ಹೇಳಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು