ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕ್ರೀಡೆಯಲ್ಲಿ ಮುಂದಿರುವ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ, ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ: ಸಿ.ಎಂ.ಸಿದ್ದರಾಮಯ್ಯ ಭರವಸೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕ್ರೀಡೆಯಲ್ಲಿ ಮುಂದಿರುವ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ, ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಬೆಂಗಳೂರು ನ 14: ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಗೆ ಜಾತಿ, ಧರ್ಮದ ಗಡಿ ಮತ್ತು ಮಿತಿಗಳಿಲ್ಲ. ಕ್ರೀಡಾಪಟು ಎಲ್ಲಾ ತಾರತಮ್ಯಗಳನ್ನು ಮೀರಿರುತ್ತಾನೆ ಎಂದರು.

ಕ್ರೀಡೆಗಳಲ್ಲಿ, ಒಲಂಪಿಕ್ಸ್ ನಲ್ಲಿ ಭಾಗವಹಿಸುವುದೇ ಪ್ರಶಸ್ತಿ. ಹೀಗಾಗಿ ಒಲಂಪಿಕ್ ನಲ್ಲಿ ಪ್ರಶಸ್ತಿ ಪಡೆಯುವುದೇ ಮುಖ್ಯ ಅಲ್ಲ. ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯ.

ರಾಜ್ಯ, ರಾಷ್ಟ್ರ ಮತ್ತು‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪಂದ್ಯಾವಳಿಗಳು ಆಯೋಜನೆಗೊಳ್ಳುತ್ತವೆ. ಕ್ರೀಡಾಪಟು ಆಗುವವರಿಗೆ ಪರಿಶ್ರಮ ಮತ್ತು ಉತ್ತಮ ತರಬೇತಿ ಅಗತ್ಯ. ಸರ್ಕಾರ ಮತ್ತು ಕ್ರೀಡಾ ಸಂಸ್ಥೆಗಳು ಅವಕಾಶಗಳನ್ನು ಕಲ್ಪಿಸಬೇಕು. ಶಿಕ್ಷಣ ಮತ್ತು ಕ್ರೀಡೆ ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಅತ್ಯಂತ ಅಗತ್ಯ. ಶಿಸ್ತು ಇಲ್ಲದ ಕ್ರೀಡಾಪಟುವನ್ನು ಕಾಣಲು ಸಾಧ್ಯವಿಲ್ಲ. ಶಿಸ್ತು , ಪರಿಶ್ರಮ ಇಲ್ಲದವರು ಉತ್ತಮ ಕ್ರೀಡಾಪಟು ಆಗಲು ಸಾಧ್ಯವಿಲ್ಲ. ಕ್ರೀಡೆ ಜೊತೆಗೆ ಓದು, ಶಿಕ್ಷಣ ಕೂಡ ಅಷ್ಟೇ ಮುಖ್ಯ ಎಂದರು.

ಕ್ರೀಡೆಯಲ್ಲಿ ಸಾಧಿಸುವವರಿಗೆ ಹಲವು ಸವಲತ್ತು ಮತ್ತು ಬದುಕಿನ ಅವಕಾಶಗಳನ್ನು ಕಲ್ಪಿಸುತ್ತಿದೆ. ಒಲಂಪಿಕ್ ನಲ್ಲಿ ಚಿನ್ನ ಗೆಲ್ಲುವವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂಪಾಯಿ ಕೊಡುತ್ತಿದ್ದೇವೆ.

ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸುವವರಿಗೆ ಪೊಲೀಸ್ ಇಲಾಖೆಯಲ್ಲಿ ಶೇ3 ಮತ್ತು ಇತರೆ ಇಲಾಖೆಯಲ್ಲಿ ಶೇ 2 ರಷ್ಟು ಉದ್ಯೋಗ ಮೀಸಲಿಟ್ಟಿದ್ದೇವೆ ಎಂದರು.

ಗ್ರೇಸ್ ಅಂಕಗಳ ಬಗ್ಗೆ ಪರಿಶೀಲನೆ

ಕ್ರೀಡೆಗೆ ಭಾಗವಹಿಸುವ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ ಕೊಡಬೇಕು ಎಂದು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರು ಇಟ್ಟಿರುವ ಬೇಡಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಮಹಾಕಾರ್ಯದರ್ಶಿ ಅಂಜು ಬಾಬಿ ಜಾರ್ಜ್, ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು