ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್‌ 16 ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು
ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು