ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ಸರ್ಕಾರದ ಬೆಂಬಲ, ಕುಮ್ಮಕ್ಕು ಇಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ಕಬಳಿಕೆ ಮಾಡಲು ಸಾಧ್ಯವಿಲ್ಲ: ಜಗದಂಬಿಕಾ ಪಾಲ್‌

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್ ಸರ್ಕಾರದ ಬೆಂಬಲ, ಕುಮ್ಮಕ್ಕು ಇಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ಕಬಳಿಕೆ ಮಾಡಲು ಸಾಧ್ಯವಿಲ್ಲ: ಜಗದಂಬಿಕಾ ಪಾಲ್‌

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬೆಂಬಲ ಕುಮ್ಮಕ್ಕು ಇಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ಕಬಳಿಕೆ ಮಾಡಲು ಸಾಧ್ಯವಿಲ್ಲ ಎಂದು ವಕ್ಫ್‌ ತಿದ್ದುಪಡಿ ಕಾಯ್ದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಶ್ರೀ ಜಗದಂಬಿಕಾ ಪಾಲ್‌ ಅವರು ರೈತರ ಅಹವಾಲು ಸ್ವೀಕರಿಸಿ ಅಭಿಪ್ರಾಯಪಟ್ಟಿದ್ದಾರೆ.‌

ಕರ್ನಾಟಕದಲ್ಲಿ ಹಲವೆಡೆ ವಕ್ಫ್‌ ಸೃಷ್ಟಿಸಿರುವ ಆತಂಕದ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ವಕ್ಫ್‌ ಜಂಟಿ ಸಂಸದೀಯ ಸಮಿತಿಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸಮಿತಿ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ರೈತರು, ಬಡವರು, ಮಠಗಳು, ಮಂದಿರಗಳಿಗೆ ನೀಡಿರುವ ನೋಟಿಸ್‌ಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ 60-70 ವರ್ಷಗಳಿಂದ ಕೃಷಿ ಮಾಡುತ್ತಿರುವ ಭೂಮಿ ಮೇಲೆ ವಕ್ಫ್‌ ಬೋರ್ಡ್‌ ಹಕ್ಕು ಸಾಧಿಸಲು ಹೊರಟಿದೆ. ಹೀಗಾಗಿ ರೈತರು ಪ್ರತಿಭಟಿಸುತ್ತಿದ್ದಾರೆ. ಈ ಬಗ್ಗೆ ಎಲ್ಲಾ ಮಾಹಿತಿ ಪಡೆದು ಸತ್ಯಾಸತ್ಯತೆ ತಿಳಿದು ವರದಿ ನೀಡುವುದಾಗಿ ಸಮಿತಿಯ ಅಧ್ಯಕ್ಷ ಶ್ರೀ ಜಗದಂಬಿಕಾ ಪಾಲ್‌ ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿದ್ದ ವಕ್ಫ್‌ ರಾಜಕಾರಣಕ್ಕೆ ಇದರೊಂದಿಗೆ ಕೇಂದ್ರವೂ ಪ್ರವೇಶ ಪಡೆದಂತಾಗಿದೆ.

ರಾಜ್ಯ ವಕ್ಫ್‌ ಖಾತೆ ಸಚಿವ ಜಮೀರ್‌ ಅಹ್ಮದ್‌ ಅವರು ವಕ್ಫ್‌ ತಿದ್ದುಪಡಿ ಕಾಯ್ದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಶ್ರೀ ಜಗದಂಬಿಕಾ ಪಾಲ್‌ ಅವರು ಈ ವಿಷಯದಲ್ಲಿ ಮೂಗು ತೂರಿಸುವುದು ಸರಿಯಲ್ಲ, ಇದಕ್ಕೆ ಅವರಿಗೆ ಅಧಿಕಾರವಿಲ್ಲ ಎಂದು ವಾದಿಸಿದ್ದರು.

ಇದೀಗ ಜಗದಾಂಬಿಕ ಪಾಲ್‌ ಅವರ ಕರ್ನಾಟಕ ಭೇಟಿ ಮುಗಿದಿದ್ದು, ಇನ್ನಷ್ಟೇ ಸಚಿವರು ಪ್ರತಿಕ್ರಿಯೆ ನೀಡಬೇಕಿದೆ.

ವಿಷಯಗಳು: #karnataka #peepal #peepalmedia #politics
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು