ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಿಳಾ ಅಭಿವೃದ್ಧಿ ನಿಗಮ; ಹಲವು ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಮಹಿಳಾ ಅಭಿವೃದ್ಧಿ ನಿಗಮ; ಹಲವು ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.

ಯೋಜನೆಗಳು:
ಉದ್ಯೋಗಿನಿ ಯೋಜನೆ:
ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್‌ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾತ್ತದೆ. ವಯೋಮಿತಿ 18 ರಿಂದ 55 ವರ್ಷ ಒಳಗಿರಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಘಟಕ ವೆಚ್ಚವು ಕನಿಷ್ಟ ರೂ.1 ಲಕ್ಷದಿಂದ ಗರಿಷ್ಟ ರೂ.3 ಲಕ್ಷ (ಸಹಾಯಧನ ಶೇ.50) ಮತ್ತು ಸಾಮಾನ್ಯ ವರ್ಗದವರಿಗೆ ಘಟಕ ವೆಚ್ಚ ಗರಿಷ್ಟ ರೂ.3 ಲಕ್ಷ (ಸಹಾಯಧನ ಶೇ.30 ರಷ್ಟು) ನೀಡಲಾಗುವುದು.
ಚೇತನ ಯೋಜನೆ:
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.
ಧನಶ್ರೀ ಯೋಜನೆ:
ಹೆಚ್‌ಐವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:
ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:
1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.
ಸೂಚನೆ:
ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಉದ್ಯೋಗಿನಿ ಯೋಜನೆಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು, ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಆನ್‌ಲೈನ್ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬಹುದು. ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.


ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು ಸಚಿವರು, ಶಾಸಕರು, ನಿಗಮದ ಅಧ್ಯಕ್ಷರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.


ಈ ಹಿಂದೆ ಮೇಲ್ಕಂಡ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ಎಸ್‌ಪಿ ವೃತ್ತದ ಮಹಿಳಾ ಪೊಲೀಸ್ ಠಾಣೆ ಪಕ್ಕದ ಸ್ತ್ರೀ ಸೇವಾ ನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು