ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಪ್ಪನ ಬಳುವಳಿಯೇ ಸಾಕು, ಎಮ್‌ ಪಿ ಟಿಕೆಟ್‌ ಬೇಡ: ನಟ ಶಿವರಾಜ್‌ ಕುಮಾರ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಅಪ್ಪನ ಬಳುವಳಿಯೇ ಸಾಕು, ಎಮ್‌ ಪಿ ಟಿಕೆಟ್‌ ಬೇಡ: ನಟ ಶಿವರಾಜ್‌ ಕುಮಾರ್

ಬೆಂಗಳೂರು: ಸಚಿವ ಡಿಕೆ ಶಿವಕುಮಾರ್‌ ಅವರು ಕನ್ನಡ ಚಿತ್ರನಟ ಶಿವರಾಜ್‌ಕುಮಾರ್‌ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ನೀಡುವುದಾಗಿ ಘೋಷಿಸಿದ್ದರು. ಆದರೆ ನಟ ಶಿವರಾಜ್‌ಕುಮಾರ್ ಈ ಆಫರ್‌ ತಿರಸ್ಕರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಿವರಾಜಕುಮಾರ್‌ ನನಗೆ ಅಪ್ಪ ಬಳವಳಿಯಾಗಿ ಕೊಟ್ಟ ನಟನೆಯ ವೃತ್ತಿಯೊಂದೇ ಸಾಕು, ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್‌ ಅವರು ನಿನ್ನೆ ಶಿವಣ್ಣನಿಗೆ ರಾಜಕೀಯಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಆದರೆ ಆಗ ಶಿವಣ್ಣ ಇಲ್ಲ ಈಗಾಗಲೇ ನಾನು ಐದಾರು ಸಿನೆಮಾ ಒಪ್ಪಿಕೊಂಡಿದ್ದೇನೆ. ಹೀಗಾಗಿ ರಾಜಕಾರಣಕ್ಕೆ ಬರಲು ಸಾಧ್ಯವಿಲ್ಲ ಎಂದು ನಯವಾಗಿ ಉಪಮುಖ್ಯಮಂತ್ರಿ ನೀಡಿದ್ದ ಆಫರ್‌ ತಿರಸ್ಕರಿಸಿದ್ದರು.

ಆದರೆ ಮತ್ತೆ ಒತ್ತಾಯಿಸಿದ ಡಿಕೆಶಿಯವರು “ಸಿನೆಮಾ ಮಾಡುವುದು ಯಾವಾಗಲೂ ಇರುತ್ತೆ, ಈಗ ರಾಜಕಾರಣದ ಅವಕಾಶ ಬಂದಿದೆ ಒಪ್ಪಿಕೊಳ್ಳಿ” ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ “ನಮ್ಮ ತಂದೆ ಕೊಟ್ಟಿರುವ ಬಳವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ನಮ್ಮದೇನಿದ್ದರೂ ಮೇಕಪ್‌ ಹಾಕೋದು, ಸಿನಿಮಾ ಮಾಡೋದು. ರಾಜಕೀಯ ನಮಗೆ ಬೇಡ, ಅದನ್ನು ಮಾಡೋಕೆ ಬೇರೆಯವರು ಇದ್ದಾರೆ. ನನಗೆ ರಾಜಕೀಯ ಬೇಡ” ಎಂದು ಸ್ಪಷ್ಟವಾಗಿ ಪ್ರತಿಕ್ರಿಯಿಸಿದ್ದಾರೆ

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು