ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾರ್ಮಿಕರ ಏಳು ತಿಂಗಳ ಸಂಬಳ ಬಾಕಿ ಬಟ್ಟೆ ಪ್ಯಾಕ್ಟರಿ ಮುಂದೆ ಕಾರ್ಮಿಕರ ಪ್ರತಿಭಟನೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಾರ್ಮಿಕರ ಏಳು ತಿಂಗಳ ಸಂಬಳ ಬಾಕಿ ಬಟ್ಟೆ ಪ್ಯಾಕ್ಟರಿ ಮುಂದೆ ಕಾರ್ಮಿಕರ ಪ್ರತಿಭಟನೆ


ಹಾಸನ : ಕಳೆದ ಏಳು ತಿಂಗಳುಗಳಿದ ಕಾರ್ಮಿಕರಿಗೆ ವೇತನ ನೀಡಿರುವುದಿಲ್ಲ. ತಕ್ಷಣ ಸಂಪೂರ್ಣ ಸಂಬಳ ನೀಡುವಂತೆ ಆಗ್ರಹಿಸಿ ನಗರದ ಸಮೀಪ ಹನುಮಂತಪುರ ಬಳಿ ಕೈಗಾರಿಕ ಪ್ರದೇಶದಲ್ಲಿರುವ ನ್ಯೂ ಮಿನರ್ವ್ ಮಿಲ್ ಬಟ್ಟೆ ಪ್ಯಾಕ್ಟರಿ ಮುಂದೆ ಕೆಲಸ ಮಾಡುವ ಕಾರ್ಮಿಕರು ಎ.ಐ.ಟಿ.ಯು.ಸಿ. ನೇತೃತ್ವದಲ್ಲಿ ಅನಿರ್ಧಿಷ್ಠವಧಿ ಪ್ರತಿಭಟನೆ ಆರಂಭಿಸಿದರು. ಇದೆ ವೇಳೆ ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷ ಎಂ.ಸಿ. ಡೋಂಗ್ರೆ ಮಾಧ್ಯಮದೊಂದಿಗೆ ಮಾತನಾಡಿ, ತಾಲೂಕಿನ ಹನುಮಂತಪುರದಲ್ಲಿರುವ ನ್ಯೂ ಮಿನರ್ವ ಮಿಲ್ ಸಂಸ್ಥೆಯು ನ್ಯಾಷನಲ್ ಟೆಕ್ಸ್ ಟೈಲ್ಸ್ ಕಾರ್ಪೋರೇಷನ್ (ಎನ್.ಟಿ.ಸಿ) ಭಾಗವಾಗಿದ್ದು, ದೇಶದಾದ್ಯಂತ ಈ ರೀತಿಯ 23 ಘಟಕಗಳು ಇದೆ. ಈ ಎಲ್ಲಾ ಘಟಕಗಳು ಮಾರ್ಚ್ 2020 ರಿಂದ ಸ್ಥಗಿತಗೊಂಡಿರುತ್ತವೆ.

2020 ಏಪ್ರಿಲ್ 1 ರಿಂದ ಕಾರ್ಮಿಕರಿಗೆ ಪೂರ್ತಿ ಸಂಬಳ ನೀಡದೆ ಶೇಕಡ 50 ರಷ್ಟು ಸಂಬಳವನ್ನು ನೀಡುತ್ತಾ ಬಂದಿರುತ್ತಾರೆ. ಹಾಗೂ ಉಳಿದ ವ್ಯತ್ಯಾಸದ ವೇತನವನ್ನು ಯಾವಾಗಲಾದರೊಮ್ಮೆ ನೀಡುವ ಪರಿಪಾಠ ಬೆಳೆಸಿಕೊಂಡಿರುತ್ತಾರೆ ಎಂದು ದೂರಿದರು. ಕಳೆದ ನವೆಂಬರ್ 2024 ರಿಂದ ವೇತನವನ್ನೇ ನೀಡಿರುವುದಿಲ್ಲ. ಇದರಿಂದಾಗಿ ಕಾರ್ಮಿಕರ ಜೀವನ ಅತಂತ್ರಗೊಂಡು ದುಸ್ತರವಾಗಿದೆ. ಇದರ ಪರಿಣಾಮವಾಗಿ ಕಾರ್ಮಿಕರ ಈ.ಎಸ್.ಐ, ಪ್ರಾವಿಡೆಂಟ್ ಫಂಡ್‌ಗಳಿಗೆಲ್ಲ ಕಂತುಗಳು ಸಂದಾಯವಾಗದೆ ಈ ಸೌಲಭ್ಯಗಳು ಕಾರ್ಮಿಕರಿಗೆ ಇದ್ದು ಇಲ್ಲದಂತಾಗಿದೆ. ಈ ವಿಚಾರಗಳ ಕುರಿತು ಮ್ಯಾನೇಜೆಮೆಂಟ್ ಗಮನವನ್ನು ಅನೇಕ ಬಾರಿ ಸೆಳೆದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಸಮಸ್ಯೆ ಕುರಿತು ಈ ವಿಚಾರಗಳನ್ನು ಮುಂದಿಟ್ಟುಕೊಡು ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಮುಂದೆ ಕಾರ್ಮಿಕರು ಸೇರಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು. ಸರಕಾರದ ಗಮನ ಸೆಳೆದರೂ ಕೂಡ ಇದುವರೆಗೂ ಯಾವ ಗಮನವಹಿಸಿ ಸಮಸ್ಯೆ ಬಗೆಹರಿಸಿರುವುದಿಲ್ಲ. ನಿಷ್ಕಿçಯವಾಗಿದೆ. ಮಿನರ್ವ್ ಮಿಲ್ ಬಟ್ಟೆ ಪ್ಯಾಕ್ಟರಿ ಮ್ಯಾನೆಜ್ ಮೆಂಟ್ ಅತ್ಯಂತ ಬೇಜವಬ್ಧಾರಿಯುತವಾಗಿದ್ದು, ಕೂಡಲೇ ಏಳು ತಿಂಗಳ ಸಂಬಳ ಕಾರ್ಮಿಕರಿಗೆ ಕೊಡಲು ಆಗ್ರಹಿಸಿ ಜೂನ್ 14ರ ಶನಿವಾರದಂದು ತೀವ್ರತರವಾದ ಹೋರಾಟ ಮಾಡಲಾಗುವುದು. ನಮ್ಮ ಬೇಡಿಕೆ ಈಡೇರದಿದ್ದರೇ ಇಲ್ಲಿಂದ ಜಿಲ್ಲಾಧಿಕಾರಿ ಕಛೇರಿವರೆಗೂ ಹೋಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.


ಜಿಲ್ಲಾಧಿಕಾರಿಗಳು ಕೂಡ ಕಾರ್ಮಿಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ಗಂಬೀರವಾಗಿ ಗಮನಕ್ಕೆ ತೆಗೆದುಕೊಂಡು ಮಧ್ಯಪ್ರವೇಶಿಸಬೇಕಾಗಿ ವಿನಂತಿಸುತ್ತೇವೆ. ಮಾರ್ಚ್ 2020 ರಿಂದ ಸ್ಥಗಿತಗೊಂಡಿರುವ ಘಟಕವನ್ನು ಪುನರಾರಂಬಿಸುವಲ್ಲಿ ಹಾಗೂ ಕಾರ್ಮಿಕರಿಗೆ ಬಾಕಿ ವೇತನವು ಕೂಡಲೇ ದೊರಕುವಂತೆ ಮಾಡಿಕೊಡಬೇಕಾಗಿ ವಿನಂತಿಸುತ್ತೇವೆ ಎಂದು ಕೋರಿದರು.
ಪ್ರತಿಭಟನೆಯಲ್ಲಿ ಎ.ಐ.ಟಿ.ಯು.ಸಿ. ಪ್ರಧಾನ ಕಾರ್ಯದರ್ಶಿ ಬಿ.ಎಂ. ಮಧು, ಉಪಾಧ್ಯಕ್ಷ ಜೆ.ಆರ್. ಸಂತೋಷ್, ಕಾರ್ಯದರ್ಶಿ ಹೆಚ್.ಎಸ್. ಮಂಜೇಗೌಡ, ಖಜಾಂಚಿ ಜೆ.ಸಿ. ಲೋಕೇಶ್ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು