ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

P

Peepal Media Desk • ರಾಜ್ಯ

• 1 ನಿಮಿಷದ ಓದು

ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ತಮ್ಮನ್ನು ಭೇಟಿ ಮಾಡಿದ ಸಾಹಿತಿಗಳ ನಿಯೋಗಕ್ಕೆ ಭರವಸೆ

ಬೆಂಗಳೂರು, ಆಗಸ್ಟ್ 23: ನಾಡಿನ ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ನೀಡಿದರು.

ಹಿರಿಯ ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳನ್ನು ಉದಾಹರಿಸಿದರು.

ಕುಂ.ವೀರಭದ್ರಪ್ಪ, ಡಾ: ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಅವರುಗಳಿಗೆ ಅತಿ ಹೆಚ್ಚು ಬೆದರಿಕೆಗಳು ಬಂದಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ, ಭಯದ ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಒದಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿ ಯಾಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದರು.

ಸಾರ್ವಜನಿಕ ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಮಾತ್ರ ಸೀಮಿತಗೊಳಿಸಿದ್ದು, ಇತರೆಡೆ ಪ್ರತಿಭಟನೆ ಮಾಡಲು ಇರುವ ನಿಷೇಧವನ್ನು ತೆಗೆಯಬೇಕೆಂದು ಮನವಿ ಮಾಡಿದರು.

ಈವರೆಗೆ ಸುಮಾರು 15 ಪತ್ರಗಳು ಬಂದಿವೆ. ಈ ಸರ್ಕಾರ ಬಂದ ನಂತರ ಮೂರು ಪತ್ರಗಳು ಬಂದಿವೆ. ಒಂದೇ ರೀತಿಯ ಒಕ್ಕಣೆ ಇರುವ ಪತ್ರಗಳು ಬಂದಿವೆ ಎಂದು ಸಾಹಿತಿ ಡಾ: ವಸುಂಧರಾ ಭೂಪತಿ ತಿಳಿಸಿದರು.

ರಾಜ್ಯ ಶಿಕ್ಷಣ ನೀತಿ
ರಾಜ್ಯಕ್ಕೆ ಸೂಕ್ತವಾದ ಶಿಕ್ಷಣ ವ್ಯವಸ್ಥೆ ಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಖಾಸಗಿ ವಲಯದಲ್ಲಿ ಹೆಚ್ವಿನ ಉದ್ಯೋಗಾವಕಾಶಗಳಿರುವುದರಿಂದ ಹೆಚ್ಚಿನವರು ಆಂಗ್ಲ ಮಾಧ್ಯಮಕ್ಕೆ ಮೊರೆ ಹೋಗುತ್ತಾರೆ. ಇದಕ್ಕೆ ಒಂದು ಮಧ್ಯಮ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಮರುಳಸಿದ್ದಪ್ಪ ತಿಳಿಸಿದರು.

ಸೌಜನ್ಯ ಪ್ರಕರಣ

ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಸಾಹಿತಿಗಳು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ಮರುತನಿಖೆ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯಬಹುದು. ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತನಾಡಿದ್ದು, ಅವರ ಪೋಷಕರು ಮೇಲ್ಮನವಿ ಸಲ್ಲಿಸಬೇಕು ಎಂದು ವಿವರಿಸಿದರು.

ಹಿರಿಯ ಸಾಹಿತಿಗಳಾದ ಡಾ: ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ: ವಸುಂಧರಾ ಭೂಪತಿ, ಡಾ: ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ರುದ್ರಪ್ಪ ಹನಗವಾಡಿ, ಎಲ್.ಎನ್.ಮುಕುಂದರಾಜ್ ಸೇರಿ ಹಲವು ಲೇಖಕರು ಉಪಸ್ಥಿತರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version