ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯಡಿಯೂರಪ್ಪ ಪಕ್ಷದ ಹೈಕಮಾಂಡನ್ನು ಬ್ಲಾಕ್‌ ಮೇಲ್‌ ಮಾಡುತ್ತಿದ್ದಾರೆ: ಯತ್ನಾಳ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಯಡಿಯೂರಪ್ಪ ಪಕ್ಷದ ಹೈಕಮಾಂಡನ್ನು ಬ್ಲಾಕ್‌ ಮೇಲ್‌ ಮಾಡುತ್ತಿದ್ದಾರೆ: ಯತ್ನಾಳ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವಂತೆ ಹೈಕಮಾಂಡನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಿ, ಇದರೊಂದಿಗೆ ಕರ್ನಾಟಕ ಬಿಜೆಪಿ ಘಟಕದಲ್ಲಿ ಒಳಜಗಳ ಮತ್ತೆ ತೀವ್ರಗೊಂಡಿದೆ.

ಸೋಮವಾರ ರಾತ್ರಿ ಮೇಲಿನಂತೆ ಆರೋಪಗಳನ್ನು ಮಾಡಿದ ನಂತರ, “ಹೈಕಮಾಂಡ್ ಏಕೆ ಹೆದರುತ್ತಿದೆ ಎಂದು ನನಗೆ ತಿಳಿದಿಲ್ಲ. ಅವರು ಶಿಸ್ತುಕ್ರಮದ ಬಗ್ಗೆ ಮಾತನಾಡುತ್ತಾರೆ. ಹಾಗಿದ್ದರೆ ನಾವು ಗುಲಾಮರೇ? ನಮಗೆ ಶಕ್ತಿ ಇಲ್ಲವೇ? ನಮಗೂ ಜನರ ಬೆಂಬಲವಿದೆ’ ಎಂದು ಯಡಿಯೂರಪ್ಪ ಕುಟುಂಬ ಹಾಗೂ ಹೈಕಮಾಂಡ್‌ ವಿರುದ್ಧ ಕೆಂಡ ಕಾರಿದರು.

2025ರ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಯಡಿಯೂರಪ್ಪ ಕೇಂದ್ರ ನಾಯಕರನ್ನು ಬ್ಲ್ಯಾಕ್‌ ಮೇಲ್ ಮಾಡಿದ್ದರು. ನಾನು ರಾಜ್ಯದ ಬೇರೆಡೆ ಪ್ರಚಾರ ಮಾಡದೆ ಕೇವಲ ಶಿವಮೊಗ್ಗಕ್ಕೆ ಸೀಮಿತವಾಗಿರುವುದಾಗಿ ಹಿರಿಯ ನಾಯಕತ್ವವನ್ನು ಹೆದರಿಸಿದ್ದರು ಎಂದು ಯತ್ನಾಳ್‌ ಆರೋಪಿಸಿದ್ದಾರೆ.

ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಬಲಿಪಶು ಮಾಡಲಾಗಿದೆ ಎಂದೂ ಶಾಸಕ ಯತ್ನಾಳ್ ಹೇಳಿದ್ದಾರೆ.

ಅಚ್ಚರಿಯೆಂಬಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು. ಈಗ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಅವರು ತಿಳಿಸಿದರು. ತಮ್ಮನ್ನು ಸೋಲಿಸಲು ವಿಜಯೇಂದ್ರ ಕ್ಷೇತ್ರದಲ್ಲಿ ಹಾಣವನ್ನು ಚೆಲ್ಲಿದ್ದಾರೆ ಎಂದು ಬೊಮ್ಮಾಯಿ ಅವರೇ ಹೇಳಿಕೊಂಡಿದ್ದರು.

“ತಂದೆ ಮತ್ತು ಮಗ ಇಬ್ಬರೂ ಏನು ಪಿತೂರಿ ಮಾಡಿದ್ದಾರೆ ಎಂಬುದರ ಬಗ್ಗೆ ಸತ್ಯ ಹೊರಬರಬೇಕು” ಎಂದು ಅವರು ಹೇಳಿದರು.

ಶಿಕಾರಿಪುರದಲ್ಲಿ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಯತ್ನಾಳ್ ಹೇಳಿದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಪಕ್ಷದ ನಾಯಕ ಸೋಮಣ್ಣ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದರು ಎಂದ ಅವರು, ಕನಕಪುರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಯಡಿಯೂರಪ್ಪ ನಡುವೆ ಒಳ ಒಪ್ಪಂದವಾಗಿತ್ತು ಎಂದೂ ಅವರು ಆರೋಪಿಸಿದರು.

ಈ ಆರೋಪಗಳಿಗೆ ಪಕ್ಷದ ಹೈಕಮಾಂಡ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದರೆ ವಿಜಯೇಂದ್ರ ಅವರು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು