ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎತ್ತಿನಹೊಳೆ; ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ: ಆರ್‌ ಅಶೋಕ

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ಎತ್ತಿನಹೊಳೆ; ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ: ಆರ್‌ ಅಶೋಕ

ಬೆಂಗಳೂರು: ಎತ್ತಿನಹೊಳೆ ಯೋಜನೆಯನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 2010ರಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ್ದು ಎಂದು ವಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ.

ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಇಂದು ತನ್ನದೇ ಸಾಧನೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವುದು ಕಾಂಗ್ರೆಸ್ ಪಕ್ಷ ಬೌದ್ಧಿಕವಾಗಿ, ನೈತಿಕವಾಗಿ ಎಷ್ಟು ದಿವಾಳಿ ಆಗಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಎಂದು ಅವರು ಕಿಡಿಕಾರಿದ್ದಾರೆ.

2010ರಲ್ಲಿ ಅಂದಿನ ಜಲ ಸಂಪನ್ಮೂಲ ಸಚಿವರಾಗಿದ್ದ ಶ್ರೀ ಬಸವರಾಜ ಬೊಮ್ಮಾಯಿ ಅವರು ಎತ್ತಿನಹೊಳೆ ಯೋಜನೆಯ ಪ್ರಸ್ತಾವನೆಯನ್ನು ಅಂದಿನ ಮುಖ್ಯಮಂತ್ರಿ ಯಡಿಯರಪ್ಪನವರ ಮುಂದಿಟ್ಟಾಗ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಅದಕ್ಕೆ ತಾತ್ವಿಕ ಒಪ್ಪಿಗೆ ನೀಡಿತ್ತು. 2012 ಅಂದಿನ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ. ಸದಾನಂದ ಗೌಡರು ಒಟ್ಟು 8,000 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದರು.

ಅಂದಿನ ಜನಸಂಪನ್ಮೂಲ ಸಚಿವರಾಗಿದ್ದ ಅವರು ಕೇಂದ್ರ ಸರ್ಕಾರದಿಂದ ಮತ್ತು ಇನ್ನಿತರ ಪ್ರಾಧಿಕಾರಗಳಿಂದ ಎಲ್ಲ ರೀತಿಯ ಅನುಮತಿ ಪಡೆಯಲು ಕಾರಣರಾದರು. ನಂತರ 2013ರಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರ ವೇಳೆಗೆ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಮಾತು ಕೊಟ್ಟು, ಬಯಲು ಸೀಮೆ ಜನರಿಗೆ ಮೋಸ ಮಾಡಿದರು ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಈ ಯೋಜನೆ ಪೂರ್ಣಗೊಳಿಸುವ ಬದ್ಧತೆ ತೋರಲೇ ಇಲ್ಲ. ನಂತರ 2022-23ರ ಬಜೆಟ್ ನಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ 3,000 ಕೋಟಿ ರೂಪಾಯಿ ಅನುದಾನ ನೀಡಿ ಎತ್ತಿನಹೊಳೆ ಯೋಜನೆಗೆ ವೇಗ ನೀಡಿತ್ತು. 2014ರಲ್ಲಿ 8,500 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಯೋಜನೆಯ ವೆಚ್ಚ ಇದೀಗ 23,251 ಕೋಟಿ ರೂ.ಗೆ ಮುಟ್ಟಿದೆ. ಇದಕ್ಕೆ ಯಾರು ಕಾರಣ? 2013ರಿಂದ ಈಗ 2024ರವರೆಗೆ ಒಟ್ಟು ಸುಮಾರು 7-8 ವರ್ಷ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು, ಸುಮಾರು ಆರೂವರೆ ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿದ್ದರು.

ಈ ಯೋಜನೆ ಇಷ್ಟು ವಿಳಂಬವಾಗಲು ಯಾರು ಕಾರಣ? ಯೋಜನಾ ವೆಚ್ಚ ಆರಂಭಿಕ ಅಂದಾಜಿಗಿಂತ ಮೂರು ಪಟ್ಟು ಹೆಚ್ಚಾಗಲು ಕಾರಣ ಯಾರು? ಇಷ್ಟಾದರೂ ಬೆಟ್ಟ ಅಗೆದು ಇಲಿ ಹಿಡಿದರು ಎಂಬಂತೆ ಕಟ್ಟ ಕಡೆಯ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ತಲುಪುತ್ತದೆಯೋ ಇಲ್ಲವೋ ಎಂಬ ದಟ್ಟ ಅನುಮಾನ ಈ ಜಿಲ್ಲೆಗಳ ಜನರಲ್ಲಿ ಕಾಡುತ್ತಿದೆ. ಅಸಲಿಗೆ ಈ ಯೋಜನೆ ರೂಪಿಸಿದ್ದೇ ಈ ಮೂರು ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು ಎಂದು ಅವರು ಹೇಳಿದ್ದಾರೆ.

ಈ ಉದ್ದೇಶವೇ ಸಾರ್ಥಕವಾಗದಿದ್ದರೆ ಈ ಇಡೀ ಯೋಜನೆ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಸಿಎಂ ಹಾಗು ಡಿಸಿಎಂ ಅವರಿಗೆ ನಿಜವಾಗಿಯೂ ಈ ಭಾಗದ ಜನರ ಬಗ್ಗೆ ಬದ್ಧತೆ ಇದ್ದಿದ್ದರೆ ಎತ್ತಿನಹೊಳೆ ಯೋಜನೆಗೆ ಈ ಮೂರು ಜಿಲ್ಲೆಗಳಲ್ಲಿ ಒಂದು ಕಡೆ ಚಾಲನೆ ನೀಡಬೇಕಾಗಿತ್ತು. ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರೆಂಟಿಗಳ ರೀತಿಯಲ್ಲಿ ಇಂದಿನ ಕಾರ್ಯಕ್ರಮವೂ ಒಂದು ಬಿಟ್ಟಿ ಪ್ರಚಾರ ಪಡೆಯುವ ನಾಟಕವೇ ಹೊರತು ಇದರಿಂದ ಜನರಿಗೆ ಯಾವುದೇ ಲಾಭವಿಲ್ಲ ಎಂದು ಅವರು ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು