ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುವಜನತೆ ಅಂಬೇಡ್ಕರ್ ಮತ್ತು ಸಂವಿಧಾನದ ಕುರಿತು ತಿಳಿಯಬೇಕು: ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ

P

Peepal Media • ರಾಜ್ಯ

• 1 ನಿಮಿಷದ ಓದು

ಯುವಜನತೆ ಅಂಬೇಡ್ಕರ್ ಮತ್ತು ಸಂವಿಧಾನದ ಕುರಿತು ತಿಳಿಯಬೇಕು: ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ

ಶಿವಮೊಗ್ಗ, ಫೆ.24: ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಕುರಿತು ವ್ಯತಿರಿಕ್ತವಾಗಿ ನಡೆದುಕೊಳ್ಳಲಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಸಂವಿಧಾನ ಹಾಗೂ ಅಂಬೇಡ್ಕರ್ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸೋಮವಾರ ನಗರದ ಕುವೆಂಪು ರಂಗಮಂದಿರಲ್ಲಿ ಆಯೋಜಿಸಿದ್ದ “ಅಂಬೇಡ್ಕರ್ ಓದು” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಮಾಜದ ವ್ಯವಸ್ಥೆಯು ಕವಲು ಒಡೆದ ದಾರಿಯಾಗಿದೆ. ಈ ಸಮಯದಲ್ಲಿ ಅಂಬೇಡ್ಕರ್ ಕುರಿತಾದ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ರಾಜ್ಯಾದ್ಯಂತ ವರ್ಷವಿಡಿ ನಡೆಯಬೇಕು. ಆ ಮೂಲಕ ಸಂವಿಧಾನದ ಪರಿಕಲ್ಪನೆ ಎಲ್ಲರಿಗೂ ಅರ್ಥವಾಗಬೇಕು ಎಂದರು.

ಗಣರಾಜ್ಯೋತ್ಸವ ದಿನವು ದೇಶಕ್ಕೆ ಮಹೋನ್ನತವಾಗಿದೆ. ಯಾಕೆಂದರೆ ಸಂವಿಧಾನವನ್ನು ಕೂಡ ಅದೇ ದಿವಸ ಸಮರ್ಪಿಸಲಾಗಿದೆ. ನಮ್ಮ ದೇಶಕ್ಕೆ ಸಂವಿಧಾನವನ್ನು ಸಿದ್ದಪಡಿಸಲು ಅಂಬೇಡ್ಕರ್ ಒಳಗೊಂಡಂತೆ ಅನೇಕ ಮಹಾನೀಯರು ಹಲವು ದೇಶಗಳನ್ನು ಸುತ್ತಿ ಅಲ್ಲಿನ ಸಂವಿಧಾನವನ್ನು ಅಧ್ಯಯನ ಮಾಡಿ ಅದರಿಂದ ಅನೇಕ ಮಾಹಿತಿ ಹೆಕ್ಕಿ ತೆಗೆದು ಈ ದೇಶಕ್ಕೆ ಬೃಹತ್ ಸಂವಿಧಾನ ಕೊಟ್ಟಿದ್ದಾರೆ ಎಂದು ತಿಳಿಸಿದರು.

ನಮ್ಮೆಲ್ಲರ ಬದುಕಿನ ಅಸ್ತಿತ್ವ ಸಂವಿಧಾನದ ಅಡಿಯಲ್ಲಿದೆ. ಈ ನಮ್ಮ ಸಂವಿಧಾನದಲ್ಲಿ ಶರಣರು, ತುಳಿತಕ್ಕೆ ಒಳಗಾದವರ ಸಮಾನತೆಯ ಆಶಯ ಇದೆ. ಆ ದಿಸೆಯಲ್ಲಿ ಪ್ರತಿಯೊಬ್ಬರು ಸಂವಿಧಾನವನ್ನು ಅರಿತುಕೊಳ್ಳಬೇಕು. ಅದರ ಗಂಭೀರತೆ ತಿಳಿಯಬೇಕು. ಈ ಮೂಲಕ ನಾವೆಲ್ಲ ದೇಶವನ್ನು ಮುನ್ನಡೆಸಬೇಕು. ಇದನ್ನು ಮರೆತರೆ ಸಮಾಜದಲ್ಲಾಗುವ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದರು.

ಕುವೆಂಪು ವಿಶ್ವವಿದ್ಯಾಲಯದ ಸಂಶೋಧನಾರ್ಥಿ ಎಂ.ಸಂಪತ್‌ಕುಮಾರ್ ವಿಶೇಷ ಉಪನ್ಯಾಸ ನೀಡಿ, “ಅಂಬೇಡ್ಕರ್ ಓದು” ಎನ್ನುವುದು ಅವರ ತತ್ವ, ಆದರ್ಶಗಳ ಮೂಲಕ ಅರ್ಥೈಸಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಅದನ್ನು ಮರೆತಿದ್ದಾರೆ. ಯುವಜನತೆ ಮೊಬೈಲ್‌ನ ಗೀಳಿಗೆ ಬಿದ್ದು ಓದುವುದನ್ನೆ ಕಡಿಮೆ ಮಾಡಿದ್ದಾರೆ ಎಂದರು.

ಧೈರ್ಯ, ಹಠ, ಛಲ ಇದ್ದರೆ ಮಾತ್ರ ನಾವು ಏನನ್ನಾದರೂ ಸಾಧಿಸಲು ಸಾಧ್ಯವೆಂದು ಬ್ರಿಟನ್ ವಿದ್ವಾಂಸರು ಹೇಳಿದ್ದಾರೆ. ಅಂಬೇಡ್ಕರ್ ಅದರಂತೆ ಬಾಳಿ ಬದುಕಿದವರು. ಆ ಮೂಲಕ ದೇಶಕ್ಕೆ ಬೃಹತ್ ಸಂವಿಧಾನ ನೀಡಿದರು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳಾ ಸಮುದಾಯಕ್ಕೆ ಶಿಕ್ಷಣದ ಹಕ್ಕು ಕೊಟ್ಟು ಎಲ್ಲರಂತೆ ಸರಿಸಮಾನವಾಗಿ ಬಾಳಲು ಅವಕಾಶ ಮಾಡಿಕೊಟ್ಟರು ಎಂದರು.

ಅಂಬೇಡ್ಕರ್ ಅವರೇ ಒಂದು ಪ್ರೇರಣಾ ಶಕ್ತಿ. ಇಂದಿನ ಯುವಜನತೆ ಅವರನ್ನು ಅರ್ಥೈಸಿಕೊಂಡು ಆ ದಾರಿಯಲ್ಲಿ ಸಾಗಬೇಕು. ಆಂಬೇಡ್ಕರ್ ಅವರ ನಾಯಕತ್ವ ಗುಣವನ್ನು ಬೆಳಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದರು.

“ಅಂಬೇಡ್ಕರ್ ಓದು” ಅಂಗವಾಗಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ಬದುಕು ಮತ್ತು ಸಾಧನೆಗಳ ಪ್ರಬಂಧ, ರಸಪ್ರಶ್ನೆ, ಆಶುಭಾಷಣ ಹಾಗೂ ಕವನ ವಾಚನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಿ.ಮಲ್ಲೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಹೆಚ್.ಉಮೇಶ್, ಪುಸ್ತಕ ಮನೆ ಪ್ರಕಾಶಕರಾದ ಸುಂದರ್ ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version