ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಿಪಂ ಸಿಇಒಗೆ ಗ್ರಾಪಂ ನೌಕರರನ್ನು ವಜಾಗೊಳಿಸುವ ಅಧಿಕಾರವಿಲ್ಲ – ಹೈಕೋರ್ಟ್ ಸ್ಪಷ್ಟನೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಜಿಪಂ ಸಿಇಒಗೆ ಗ್ರಾಪಂ ನೌಕರರನ್ನು ವಜಾಗೊಳಿಸುವ ಅಧಿಕಾರವಿಲ್ಲ – ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು :  ಗ್ರಾಮ ಪಂಚಾಯಿತಿ (gram panchayat) ನೌಕರರನ್ನು ಸೇವೆಯಿಂದ ವಜಾಗೊಳಿಸುವ ಅಧಿಕಾರ ಜಿಲ್ಲಾ ಪಂಚಾಯತ್​ (Zilla Panchayat) ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ (ಸಿಇಒ) ಇಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court ) ಸ್ಪಷ್ಟಪಡಿಸಿದೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮ ಪಂಚಾಯಿತಿಯು 2015ರಲ್ಲಿ ಪ್ರವೀಣ್ ಅವರನ್ನು ಡೇಟಾ ಎಂಟ್ರಿ ಆಪರೇಟರ್ ಆಗಿ ನೇಮಕ ಮಾಡಿತ್ತು. ಆದರೆ, 2018ರಲ್ಲಿ ಅಧಿಕಾರಕ್ಕೆ ಬಂದ ಹೊಸ ಪಂಚಾಯಿತಿ ಆಡಳಿತ ಮಂಡಳಿಯು  ಪ್ರವೀಣ್ ಸೇರಿದಂತೆ 9 ಜನರನ್ನು ಕೆಲಸದಿಂದ ತೆಗೆಯಲು ನಿರ್ಣಯಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್​ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು ನಿಯಮಾನುಸಾರ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಒಗೆ ಸೂಚಿಸಿತ್ತು. ಅದರಂತೆ ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ಅವರು 2021ರ ಜೂನ್​ 18ರಂದು ಪ್ರವೀಣ್ ಅವರನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿದ್ದರಿಂದ, ಅರ್ಜಿದಾರರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್ ದೇವದಾಸ್​ ಮತ್ತು ಎಂ ಬೃಂಗೇಶ್​ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆಯ 1993ರ ಸೆಕ್ಷನ್ 113(3)ರ ಪ್ರಕಾರ ನೌಕರರನ್ನು ತೆಗೆದುಹಾಕುವ ಸಂಪೂರ್ಣ ಅಧಿಕಾರ ಕೇವಲ ಗ್ರಾಮ ಪಂಚಾಯಿತಿಗೆ ಮಾತ್ರ ಇರಲಿದೆ. ಕಾಯಿದೆಯ ಅನ್ವಯ ಗ್ರಾಮ ಪಂಚಾಯಿತಿ ನೌಕರರ ನೇಮಕಾತಿ ಅಥವಾ ವಜಾ ಪ್ರಕ್ರಿಯೆಗಳು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುತ್ತವೆ. ಹೀಗಾಗಿ, ಸಿಇಒ ಹೊರಡಿಸಿದ್ದ ವಜಾ ಆದೇಶವು ಕಾನೂನುಬಾಹಿರ ಮತ್ತು ಅವರ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ತಿಳಿಸಿ ಸಿಇಒ ನೀಡಿದ್ದ ವಜಾ ಆದೇಶವನ್ನು ರದ್ದುಪಡಿಸಿತು.

ಪಂಚಾಯಿತಿಯಲ್ಲಿ 2021ರಿಂದ ಸ್ಥಗಿತಗೊಂಡಿರುವ ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿದಾರರು ಭಾಗವಹಿಸಲು ನ್ಯಾಯಾಲಯ ಮುಕ್ತ ಅವಕಾಶ ಕಲ್ಪಿಸಿದೆ. ಅವರ ಅರ್ಜಿಯನ್ನು ಸ್ವೀಕರಿಸಿ, ವಯೋಮಿತಿ ಸಡಿಲಿಕೆ ಮತ್ತು ಸೇವಾ ಅನುಭವದ ವೆಯ್ಟೇಜ್ ನೀಡಿ ನೇಮಕಾತಿಯಲ್ಲಿ ಅವಕಾಶ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು