Saturday, October 25, 2025

ಸತ್ಯ | ನ್ಯಾಯ |ಧರ್ಮ

 ಕರುನಾಡು ತಲೆ ತಗ್ಗಿಸುವ ಸುದ್ದಿ, ಅಪ್ರಾಪ್ತೆ ಮೇಲೆ ಸರಣಿ ಅತ್ಯಾ*ಚಾರ ನಾಲ್ವರ ಬಂಧನ

ಹಾವೇರಿ : ಇಡೀ ಕರ್ನಾಟಕವೇ ತಲೆ ತಗ್ಗಿಸುವಂಥಾ ಘಟನೆಯೊಂದು ಹಾವೇರಿಯಲ್ಲಿ (Haveri shocker) ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ (Sexual harassment) ಎಸಗಲಾಗಿದೆ. ಹೌದು ಹಾವೇರಿ ಜಿಲ್ಲೆಯ ಹಾನಗಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ಸ್ಟಾ ಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದು ಇದರಿಂದ ಆಘಾತಗೊಂಡ ಮನೆ ಮಂದಿ, ಬಾಲಕಿಯನ್ನು ವಿಚಾರಣೆ ನಡೆಸಿದ ವೇಳೆ ಉದಯ್ ಹಾಗೂ ಕಿಶನ್ ಸೇರಿ ಹಲವು ಬಾರಿ ಅತ್ಯಾಚಾರ ಎಸಗಿರುವ ವಿಚಾರ ಹೇಳಿಕೊಂಡಿದ್ದಾಳೆ. ಘಟನೆ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು ಇದೀಗ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉದಯ್, ಕಿಶನ್, ಆಕಾಶ್ ಮತ್ತು ಚಂದ್ರು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ A1 ಉದಯ್ ಮತ್ತು A2 ಕಿಶನ್ ಅತ್ಯಾಚಾರ ಎಸಗಿದ ಆರೋಪಿಗಳಾಗಿದ್ದು, A3 ಆಕಾಶ್ ಮತ್ತು A4 ಚಂದ್ರು ಅತ್ಯಾಚಾರಕ್ಕೆ ಸಹಕರಿಸಿದ ಆರೋಪಿಗಳಾಗಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣ : ಆರು ಮಂದಿ ಸೆರೆ

ಇನ್ನು ಅಕ್ಟೋಬರ್ 21 ರಂದು ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರ ಮನೆಗೆ ನುಗ್ಗಿ ಐವರು ಕಾಮುಕರು ಸಾಮೂಹಿಕ ಅತ್ಯಾ*ಚಾರ ಎಸಗಿ, ದರೋಡೆ ಮಾಡಿರುವ ಘಟನೆ ಗಂಗೊಂಡನಹಳ್ಳಿಯಲ್ಲಿ ನಡೆದಿತ್ತು. ಸದ್ಯ ಆರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮನೆಯಲ್ಲಿ ಇಬ್ಬರು ಮಹಿಳೆಯರು, ಇಬ್ಬರು ವಯಸ್ಕರು ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಇದ್ದರು. ಆದರೂ, ಮನೆಗೆ ಬಂದ ಐವರು ಬಾಗಿಲು ತೆರೆಯುವಂತೆ ಕೇಳಿದರು. ಆನಂತರ ಭಯಗೊಂಡು ಸಂತ್ರಸ್ತೆ ಬಾಗಿಲು ತೆರೆದಿದ್ದಾರೆ. ಆ ನಂತರ ಏಕಾಏಕಿ ಒಳನುಗ್ಗಿದ್ದಾರೆ.ನಾವು ಪೀಣ್ಯ ಪೊಲೀಸರ ಇನ್ಫಾರ್ಮರ್ಸ್ ಎಂದು ಹೇಳಿಕೊಂಡ ದುಷ್ಕರ್ಮಿಗಳು, ನಿಮ್ಮ ಮನೆಯಲ್ಲಿ ಗಾಂಜಾ ಮಾರಾಟ ಮತ್ತು ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ ಎಂದು ಆರೋಪಿಸಿ ದಾಳಿಯ ನಾಟಕವಾಡಿದ್ದಾರೆ.

ಮೊದಲು ಮನೆಯಲ್ಲಿದ್ದ ಇಬ್ಬರು ಪುರುಷರನ್ನು ಕಟ್ಟಿಹಾಕಿದ ನಂತರ, ಸಂತ್ರಸ್ತ ಮಹಿಳೆಯ 14 ವರ್ಷದ ಮಗ ಹಾಗೂ ಆಕೆಯ ಸ್ನೇಹಿತೆಯ ಮೇಲೂ ಹಲ್ಲೆ ನಡೆಸಿದ್ದಾರೆ. ನಂತರ, ಮಹಿಳೆಯನ್ನು ಪಕ್ಕದ ಕೋಣೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಇಷ್ಟಕ್ಕೆ ಸುಮ್ಮನಾಗಿಲ್ಲ. ಮನೆಯಲ್ಲಿದ್ದ 2 ಮೊಬೈಲ್ ಮತ್ತು 25 ಸಾವಿರ ನಗದು ಡೋಚಿ ಪರಾರಿ ಆಗಿದ್ದರು. ಸಂತ್ರಸ್ತೆಯ ಕುಟುಂಬ ಇಬ್ಬರು ಆರೋಪಿಗಳ ಗುರುತು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಆಧಾರದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page