ಇದೀಗ ಬಂದ ಸುದ್ದಿಯ ಪ್ರಕಾರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿದ್ದಾರೆ.
ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗಾರರೊಡನೆ ಮಾತನಾಡುತ್ತಿದ್ದ ಅವರು ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷನಾಗಿ ಎರಡು ವರ್ಷ ಕಳೆದಿದ್ದು ಈ ಹಿನ್ನೆಲೆಯಲ್ಲೂ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಒಡೆದ ಮನೆಯಾಗಿದ್ದು ಅದರ ಹಿರಿಯರು ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ವಿಷಯದಲ್ಲೇ ಮೀನ ಮೇಷ ಎಣಿಸುತ್ತಿರುವ ಸಮಸಯದಲ್ಲಿ ಅಧ್ಯಕ್ಷರು ರಾಜೀನಾಮೆ ನೀಡಿರುವುದು ರಾಜಕೀಯ ಆಸಕ್ತರ ಕತೂಹಲವನ್ನು ಇನ್ನಷ್ಟು ಕೆರಳಿಸಿದೆ. ಪಕ್ಷದ ಒಳಗೂ ನಳಿನ್ ಅವರ ಅಧ್ಯಕ್ಷತೆ ಕುರಿತು ತಕರಾರು ಇರುವುದು ಕಾರ್ಯಕರ್ತರ ಅಸಹನೆಯಲ್ಲಿ ಕಾಣುತ್ತಿತ್ತು. ಈಗ ಕಾರ್ಯಕರ್ತರೂ ಮುಂದಿನ ಅಧ್ಯಕ್ಷರು ಯಾರಾಗಬಹುದೆನ್ನುವ ಕಾತರದಲ್ಲಿದ್ದಾರೆ.