Saturday, June 15, 2024

ಸತ್ಯ | ನ್ಯಾಯ |ಧರ್ಮ

ಕಾವೇರಿ ವಿವಾದ: ಬೆಂಗಳೂರು, ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವ ಸರ್ಕಾರದ ಕ್ರಮವನ್ನು ವಿರೋಧಿಸಿ ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಶನಿವಾರ ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಬಿಗಿ ಭದ್ರತೆ ಏರ್ಪಡಿಸಿದೆ.

ಪ್ರತಿಭಟನೆ ವೇಳೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡದಂತೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿವಿಧ ರೈತರು ಮತ್ತು ಕನ್ನಡಪರ ಸಂಘಟನೆಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಘೋಷಿಸಿವೆ. ಬಿಜೆಪಿ ಮುಖಂಡ ಸಿ.ಟಿ. ರವಿ ಬೆಳಗ್ಗೆ ಮಂಡ್ಯದಲ್ಲಿ ಪ್ರತಿಭಟನಾಕಾರರೊಂದಿಗೆ ಸೇರುತ್ತಿದ್ದು, ಮಾಜಿ ಸಿಎಂ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಿಂದ ಆಗಮಿಸಿದ ನಂತರ ಮಂಡ್ಯದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಘೋಷಿಸಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ. ಬಿಜೆಪಿ ಘಟಕ ಬೆಂಗಳೂರಿನಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟವು. ಪ್ರದೇಶದಿಂದ ರಸ್ತೆ ತಡೆಗಳು ವರದಿಯಾಗಿವೆ. ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆಯ ಒಡೆತನದ ಬಸ್‌ಗಳು ಸಂಚರಿಸುವ ಬೆಂಗಳೂರಿನ ರಸ್ತೆಗಳ ಬಳಿ ಪ್ರತಿಭಟನಾಕಾರರು ದಾಳಿ ನಡೆಸುವ ಸಾಧ್ಯತೆ ಹೆಚ್ಚಿರುವುದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ತಮಿಳುನಾಡಿನಿಂದ ಬರುವ ಬಸ್‌ಗಳು ನಿಲುಗಡೆಯಾಗಿರುವ ಮೈಸೂರು ಸ್ಯಾಟಲೈಟ್ ಬಸ್ ಟರ್ಮಿನಲ್‌ನಲ್ಲಿ ಪೊಲೀಸ್ ಇಲಾಖೆಯು ತುಕಡಿಯನ್ನು ನಿಯೋಜಿಸಿದೆ.

Related Articles

ಇತ್ತೀಚಿನ ಸುದ್ದಿಗಳು