Tuesday, June 18, 2024

ಸತ್ಯ | ನ್ಯಾಯ |ಧರ್ಮ

ಇಡಿ ಕೇಜ್ರಿವಾಲ್ ಅವರನ್ನು ಬಂಧಿಸಲಿದೆ: ಎಎಪಿ ನಾಯಕರ ಆರೋಪ

ಹೊಸದೆಹಲಿ: ಆಪ್ ನಾಯಕ ಹಾಗೂ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ನವೆಂಬರ್ 2ರಂದು ಇಡಿ ಬಂಧಿಸುವ ಸಾಧ್ಯತೆಯಿದೆ.

ಸೋಮವಾರ, ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮನಿ ಲಾಂಡರಿಂಗ್ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಇಡಿ ಕೇಜ್ರಿವಾಲ್‌ಗೆ ನೋಟಿಸ್ ಜಾರಿ ಮಾಡಿದೆ. ಹೇಳಿಕೆ ದಾಖಲಿಸಿಕೊಳ್ಳಲು ತನಿಖೆಗೆ ಬರುವಂತೆ ನೋಟಿಸ್ ನೀಡುವ ಮೂಲಕ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಎಎಪಿ ಅನುಮಾನ ವ್ಯಕ್ತಪಡಿಸುತ್ತಿದೆ.

ಈ ಕುರಿತು ಪಕ್ಷದ ಪ್ರಮುಖ ನಾಯಕರಾದ ಸಚಿವೆ ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ಗೊತ್ತಿರುವ ಪ್ರಮುಖ ನಾಯಕರನ್ನು ಜೈಲಿಗೆ ಕಳುಹಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದರು.

ನವೆಂಬರ್ 2ರಂದು ಕೇಜ್ರಿವಾಲ್ ಅವರನ್ನು ಬಂಧಿಸಿದಲ್ಲಿ, ಅವರನ್ನು ಹಗರಣದ ನೆಪದಲ್ಲಿ ಬಿಜೆಪಿ ವಿರುದ್ಧ ಮಾತನಾಡಿದ್ದಕ್ಕಾಗಿ ಬಂಧಿಸಲಾಗಿದೆಯೆನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು. ಎಎಪಿ ದೆಹಲಿ ವಿಧಾನಸಭಾ ಚುನಾವಣೆ ಮತ್ತು ಮುನ್ಸಿಪಲ್ ಚುನಾವಣೆಗಳಲ್ಲಿ ಎರಡು ಬಾರಿ ಬಿಜೆಪಿಯನ್ನು ಸೋಲಿಸಿತು. ಮೋದಿಗೆ ಕೇಜ್ರಿವಾಲ್ ಎಂದರೆ ಭಯ. ಚುನಾವಣೆಯಲ್ಲಿ ಎಎಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದಿದ್ದರೂ ಬಂಧನದ ಮೂಲಕ ಪಕ್ಷವನ್ನು ಮುಗಿಸಲು ಬಿಜೆಪಿ ಬಯಸುತ್ತಿದೆ ಎಂದು ಅತಿಶಿ ಆರೋಪಿಸಿದ್ದಾರೆ.

ದೇಶದಲ್ಲಿ ಬಿಜೆಪಿ ರಾಜಕೀಯವಾಗಿ ಸೋಲಿಸಲಾಗದ ನಾಯಕರನ್ನು ತನಿಖಾ ಸಂಸ್ಥೆಗಳ ಮೂಲಕ ಟಾರ್ಗೆಟ್ ಮಾಡುತ್ತಿದೆ ಎಂದು ಟೀಕಿಸಿದರು. ಎಎಪಿ ನಾಯಕರು ಜೈಲಿಗೆ ಹೋಗಲು ಹೆದರುವುದಿಲ್ಲ ಮತ್ತು ತಮ್ಮ ಕೊನೆಯ ಉಸಿರು ಇರುವವರೆಗೂ ಸಂವಿಧಾನವನ್ನು ಉಳಿಸಲು ಹೋರಾಟವನ್ನು ಮುಂದುವರೆಸುತ್ತಾರೆ ಎಂದು ಅತಿಶಿ ಹೇಳಿದರು.
ಸೌರಭ್ ಭಾರದ್ವಾಜ್ ಮಾತನಾಡಿ, ‘ಆಮ್ ಆದ್ಮಿ ಪಕ್ಷವನ್ನು ಹತ್ತಿಕ್ಕಲು ಬಿಜೆಪಿ ಪ್ರಯತ್ನಿಸಿದಾಗಲೆಲ್ಲ ಅದು ಬಲಗೊಳ್ಳುತ್ತದೆ. ಎಎಪಿ ತನಗಾಗಿ ಕೆಲಸ ಮಾಡುತ್ತಿಲ್ಲ, ಸಾಮಾನ್ಯ ಜನರಿಗಾಗಿ ಕೆಲಸ ಮಾಡುತ್ತಿದೆʼ ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು