ಹೊಸದೆಹಲಿ: ದೆಹಲಿ ಹೈಕೋರ್ಟ್ ತನ್ನ ಜಾಮೀನಿಗೆ ತಡೆ ನೀಡಿರುವುದನ್ನು ಪ್ರಶ್ನಿಸಿ ಆಪ್ ರಾಷ್ಟ್ರೀಯ ಸಂಚಾಲಕ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ್ದು ಗೊತ್ತೇ ಇದೆ. ಆದರೆ, ಜಾಮೀನು ಆದೇಶವನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ಮೊದಲು ತಡೆ ನೀಡುವಂತೆ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದೆ.
ಇಡಿ ಆಕ್ಷೇಪಣೆಯೊಂದಿಗೆ ವಿಚಾರಣಾ ನ್ಯಾಯಾಲಯ ಕೇಜ್ರಿವಾಲ್‌ಗೆ ನೀಡಿದ್ದ ಜಾಮೀನಿಗೆ ತಡೆ ನೀಡಿ ದೆಹಲಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಅಂತಿಮ ನಿರ್ಧಾರಕ್ಕಾಗಿ ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಯಿತು.
ತಮ್ಮ ಜಾಮೀನು ತಡೆಯನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಸಂಬಂಧಿತ ಮೂಲಗಳು ತಿಳಿಸಿವೆ.