Friday, April 11, 2025

ಸತ್ಯ | ನ್ಯಾಯ |ಧರ್ಮ

ಜೈಲಿನಲ್ಲಿ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ: ಏಮ್ಸ್ ವೈದ್ಯರು

ದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಏಮ್ಸ್‌ನ ಐವರು ಸದಸ್ಯರ ವೈದ್ಯಕೀಯ ಮಂಡಳಿ ದೃಢಪಡಿಸಿದೆ.

ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಕೇಜ್ರಿ ಅವರ ಆರೋಗ್ಯದ ಬಗ್ಗೆ ಆಮ್ ಆದ್ಮಿ ಪಕ್ಷ ಕಳವಳ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಏಮ್ಸ್ ವೈದ್ಯಕೀಯ ಮಂಡಳಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿತು.

ಇದೀಗ ಕೇಜ್ರಿ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಸಂಬಂಧಿತ ಮೂಲಗಳು ಖಚಿತಪಡಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ವರದಿಗಳ ಪ್ರಕಾರ, ಸುಮಾರು ಅರ್ಧ ಗಂಟೆ ಸಿಎಂ ಜೊತೆ ಮಾತನಾಡಿದ ಏಮ್ಸ್ ವೈದ್ಯರು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಔಷಧದಲ್ಲಿ ಬದಲಾವಣೆ ಮಾಡುವ ಅಗತ್ಯವಿಲ್ಲ ಎಂದು ತಂಡ ಹೇಳಿದೆ ಮತ್ತು ಎರಡು ಯೂನಿಟ್ ಇನ್ಸುಲಿನ್ ಪ್ರಮಾಣವನ್ನು ಮುಂದುವರಿಸಲು ಸೂಚಿಸಲಾಗಿದೆ. ಒಂದು ವಾರದ ನಂತರ ತಂಡ ಮತ್ತೊಮ್ಮೆ ಸಿಎಂ‌ ಅವರ ಪರೀಕ್ಷೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page