ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸರ್ಕಾರಿ ವಸತಿ ಕಲ್ಪಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ದೆಹಲಿ ಹೈಕೋರ್ಟ್ ನವೆಂಬರ್ 26ರಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಅರವಿಂದ್ ಕೇಜ್ರಿವಾಲ್ ಅವರು ಸೆಪ್ಟೆಂಬರ್ 17ರಂದು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಅಕ್ಟೋಬರ್ 4ರಂದು ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ನಿವಾಸವನ್ನು ಖಾಲಿ ಮಾಡಿದ್ದರು. ಪ್ರಸ್ತುತ ಅವರು ಬಂಗಲೆ ಸಂಖ್ಯೆ 5, ಫಿರೋಜ್ ಷಾ ರಸ್ತೆಯಲ್ಲಿ ವಾಸಿಸುತ್ತಿದ್ದಾರೆ. ಈ ಬಂಗಲೆಯನ್ನು ಪಂಜಾಬ್‌ನ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಅಶೋಕ್ ಮಿತ್ತಲ್ ಅವರಿಗೆ ನೀಡಲಾಗಿದೆ.
ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮನೆ ಇಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳುತ್ತಿದೆ. ರಾಷ್ಟ್ರೀಯ ಪಕ್ಷವಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಸರ್ಕಾರಿ ವಸತಿ ಸಿಗಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷವು ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಸರ್ಕಾರಿ ವಸತಿ ಸೌಕರ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದೆ.