Tuesday, December 31, 2024

ಸತ್ಯ | ನ್ಯಾಯ |ಧರ್ಮ

ಆಮ್‌ ಆದ್ಮಿ ಪಕ್ಷದ ಯೋಜನೆಗಳನ್ನು ತಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಒಂದಾಗಿವೆ: ಅರವಿಂದ್ ಕೇಜ್ರಿವಾಲ್

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಎರಡು ಪಕ್ಷಗಳು ತಮ್ಮ ಪಕ್ಷ ಪ್ರಸ್ತಾಪಿಸಿರುವ ಯೋಜನೆಗಳನ್ನು ನಿಲ್ಲಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪ್ರಸ್ತಾಪಿಸಿದ ಕಲ್ಯಾಣ ಯೋಜನೆಗಳ ಬಗ್ಗೆ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ದೂರಿದ್ದಾರೆ. ಇದರೊಂದಿಗೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಈ ಯೋಜನೆಗಳ ತನಿಖೆಗೆ ಆದೇಶಿಸಿದ್ದಾರೆ.

ಏತನ್ಮಧ್ಯೆ, ಈ ಕುರಿತು ಶನಿವಾರ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ಮೇಲೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ದೆಹಲಿ ಚುನಾವಣೆಗೂ ಮುನ್ನವೇ ಮಹಿಳೆಯರು ಮತ್ತು ಹಿರಿಯ ನಾಗರಿಕರಿಗಾಗಿ ಎಎಪಿ ಘೋಷಿಸಿದ್ದ ಯೋಜನೆಗಳನ್ನು ನಿಲ್ಲಿಸಲು ಎರಡೂ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ‘ನೇರವಾಗಿ ಕಾರ್ಯನಿರ್ವಹಿಸುವ ಧೈರ್ಯ ಇಲ್ಲದ ಕಾರಣ ಬಿಜೆಪಿ ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಅವರ ಮೂಲಕ ದೂರು ನೀಡಿದೆ. ಎಎಪಿಯನ್ನು ತಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮಹಿಳೆಯರಿಗೆ 2,100 ರೂ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಸೇವೆಯನ್ನು ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಈ ಎರಡು ಯೋಜನೆಗಳು ಜನರಿಗೆ ತುಂಬಾ ಉಪಯುಕ್ತವಾಗಿರಲಿವೆ ಎಂದು ಅವರು ಹೇಳಿದರು. ”ಈಗಾಗಲೇ ಲಕ್ಷಾಂತರ ಮಂದಿ ಹೆಸರು ನೋಂದಾಯಿಸಿದ್ದಾರೆ. ಇದರಿಂದಾಗಿ ಬಿಜೆಪಿ ಆತಂಕಕ್ಕೆ ಒಳಗಾಗಿದೆ” ಅವರು ಎಂದು ಟೀಕಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page