ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆದರೆ ದೆಹಲಿ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತಡೆಹಿಡಿದಿದೆ. ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ರೂಸ್ ಅವೆನ್ಯೂ ನ್ಯಾಯಾಲಯದಿಂದ ಒಂದು ದಿನದ ಹಿಂದೆ ಜಾಮೀನು ಪಡೆದಿದ್ದರು.
ಮುಂದಿನ ವಾರ ತೀರ್ಪು
ಇಡಿ ಅರ್ಜಿಯ ತೀರ್ಪು ಬರುವವರೆಗೆ ಕೇಜ್ರಿವಾಲ್‌ಗೆ ಜಾಮೀನು ನೀಡಿದ್ದ ಕೆಳ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರೊಂದಿಗೆ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಇಡಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಇಡಿ ಅರ್ಜಿಯ ಕುರಿತು 2ರಿಂದ ಮೂರು ದಿನಗಳಲ್ಲಿ ಆದೇಶ ನೀಡುವುದಾಗಿ ದೆಹಲಿ ಹೈಕೋರ್ಟ್ ಹೇಳಿದೆ. ಸೋಮವಾರದೊಳಗೆ ಲಿಖಿತ ವಾದ ಮಂಡಿಸುವಂತೆ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ.
ರೂಸ್ ಅವೆನ್ಯೂ ನ್ಯಾಯಾಲಯದಿಂದ ಜಾಮೀನು
ಕೇಜ್ರಿವಾಲ್‌ಗೆ ರೂಸ್ ಅವೆನ್ಯೂ ಕೋರ್ಟ್ ಜಾಮೀನು ನೀಡಿದ ನಂತರ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ವೇಳೆ ಇಡಿ ನ್ಯಾಯಾಲಯ ತನ್ನ ವಾದವನ್ನೂ ಆಲಿಸಿಲ್ಲ ಎಂದು ಹೇಳಿದೆ.