Friday, June 21, 2024

ಸತ್ಯ | ನ್ಯಾಯ |ಧರ್ಮ

ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಿಡುಗಡೆ

ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ರೌಸ್ ಅವೆನ್ಯೂ ನ್ಯಾಯಾಲಯವು ಅವರಿಗೆ ಜಾಮೀನು ನೀಡಿ ಆದೇಶಿಸಿದೆ.

ಇಂದು (ಶುಕ್ರವಾರ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಜಾಮೀನು ಆದೇಶಕ್ಕೆ 48 ಗಂಟೆಗಳ ಕಾಲ ತಡೆ ನೀಡಬೇಕೆಂಬ ಇಡಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಇದಕ್ಕೂ ಮೊದಲು, ದೆಹಲಿ ಮದ್ಯ ಹಗರಣ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ತೀರ್ಪನ್ನು ರೌಸ್ ಅವೆನ್ಯೂ ನ್ಯಾಯಾಲಯವು ಕಾಯ್ದಿರಿಸಿತ್ತು. ಏತನ್ಮಧ್ಯೆ, ಕೇಜ್ರಿವಾಲ್ ದೆಹಲಿ ಮದ್ಯ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ, ವಿಚಾರಣೆ ಮುಂದುವರೆಯಿತು. ಈ ಸಂದರ್ಭದಲ್ಲಿ ಇಡಿ, ಮದ್ಯ ಹಗರಣ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಪಾತ್ರವಿದೆ ಎಂದು ಹೇಳಿದೆ. ಅಲ್ಲದೆ, ಕೇಜ್ರಿವಾಲ್ ವಿರುದ್ಧ ಸಾಕ್ಷ್ಯಾಧಾರಗಳಿವೆ ಎಂದು ಅದು ಹೇಳಿದೆ. ಅವರು ಈ ಪ್ರಕರಣದ ತನಿಖೆಗೆ ಸಹಕರಿಸುತ್ತಿಲ್ಲಇವುಗಳನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್‌ಗೆ ಜಾಮೀನು ನೀಡಬೇಡಿ ಎಂದು ಇಡಿ ಪರವಾಗಿ ವಕೀಲರು ನ್ಯಾಯಾಲಯವನ್ನು ಕೋರಿದರು.

ಕೇಜ್ರಿವಾಲ್ ಪರ ವಕೀಲರು ವಾದ ಮಾಡಿ ಆರೋಪಗಳಷ್ಟೇ ಇವೆ. ಇದುವರೆಗೆ ಸಾಕ್ಷ್ಯವನ್ನು ತಂದಿಲ್ಲ ಎಂದರು. ಎರಡೂ ಕಡೆಯ ವಾದವನ್ನು ಆಲಿಸಿದ ರೌಸ್ ಅವೆನ್ಯೂ ಕೋರ್ಟ್ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು