ದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಜನರು ಪುನರಾಯ್ಕೆ ಮಾಡಿದರೆ ಮಾತ್ರ ಮತ್ತೆ ಕುರ್ಚಿಯ ಮೇಲೆ ಕೂರುತ್ತೇನೆ ಎಂದು ಅವರು ಹೇಳಿದ್ದಾರೆ
ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಹಾಗೂ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಬೇಕು. ನಾನು ಅಗ್ನಿ ಪರೀಕ್ಷೆಗೆ ಸಿದ್ಧ. ನನ್ನ ಭವಿಷ್ಯವನ್ನು ಮತದಾರರೇ ನಿರ್ಧರಿಸುತ್ತಾರೆ ಎಂದರು. ನಾನು ಪ್ರಾಮಾಣಿಕನೆಂದು ಭಾವಿಸಿದರೆ ಮಾತ್ರ ನನಗೆ ಮತ ನೀಡಿ ಎಂದು ಕೇಜ್ರಿವಾಲ್ ಕೇಳಿಕೊಂಡರು.
ದೆಹಲಿ ಲಿಕ್ಕರ್ ಪಾಲಿಸಿ ಹಗರಣದಲ್ಲಿ ಬಂಧಿತರಾದ ಆರು ತಿಂಗಳ ನಂತರ ಶುಕ್ರವಾರ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಿನ್ನೆ (ಶನಿವಾರ) ತಮ್ಮ ಪತ್ನಿ ಸುನೀತಾ ಕೇಜ್ರಿವಾಲ್, ಆಪ್ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರೊಂದಿಗೆ ನವದೆಹಲಿಯ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.