Thursday, August 15, 2024

ಸತ್ಯ | ನ್ಯಾಯ |ಧರ್ಮ

ಹದಗೆೆಡುತ್ತಿರುವ ಕೇಜ್ರಿವಾಲ್ ಆರೋಗ್ಯ; ‘ಇಂಡಿಯಾ’ ಮೈತ್ರಿಕೂಟದಿಂದ ಪ್ರತಿಭಟನೆ ಸಿದ್ಧತೆ

ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಬಗ್ಗೆ ಆಮ್ ಆದ್ಮಿ ಪಕ್ಷ ಆತಂಕ ವ್ಯಕ್ತಪಡಿಸಿದೆ.

ವ್ಯವಸ್ಥಿತ ಚಿತಾವಣೆ ಮೂಲಕ ಜೈಲು ಸೇರಿರುವ ಅರವಿಂದ ಕೇಜ್ರಿವಾಲ್ ಪರವಾಗಿ ಹಾಗೂ ತನಿಖಾ ಸಂಸ್ಥೆಗಳನ್ನು ತನ್ನ ಹಿಡಿತಕ್ಕೆ ತಗೆದುಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟಿಸಲು ‘ಇಂಡಿಯಾ ‘ ಮೈತ್ರಿಕೂಟ ಜುಲೈ 30 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ.

‘ಅರವಿಂದ ಕೇಜ್ರವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ. ಅಲ್ಲದೆ, ಕೇಬ್ರಿವಾಲ್ ಅವರ ಜೀವನದೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಸ್ಸೇನಾ ಆಟವಾಡುತ್ತಿದ್ದಾರೆ’ ಎಂದು ಪಕ್ಷ ಆರೋಪಿಸಿದೆ.

ಮಾರ್ಚ್ 21ರಂದು ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್‌ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜುಲೈ 12ರಂದು ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಇದೇ ಹಗರಣದ ಪ್ರತ್ಯೇಕ ಪ್ರಕರಣದಲ್ಲಿ ಕೇಜ್ರವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಈ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ವಿಸ್ತರಿಸಿದೆ. ಹೀಗಾಗಿ, ಅವರು ಇನ್ನೂ ಜೈಲಿನಲ್ಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page