Home ದೇಶ ಮುಂದುವರೆದ ಕೇಜ್ರಿವಾಲ್ ನ್ಯಾಯಾಂಗ ಬಂಧನ; ಮತ್ತೆ ಜುಲೈ 3ರವರೆಗೆ ವಿಸ್ತರಣೆ

ಮುಂದುವರೆದ ಕೇಜ್ರಿವಾಲ್ ನ್ಯಾಯಾಂಗ ಬಂಧನ; ಮತ್ತೆ ಜುಲೈ 3ರವರೆಗೆ ವಿಸ್ತರಣೆ

0

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 3ರವರೆಗೆ ವಿಸ್ತರಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ಸಾರ್ವತ್ರಿಕ ಚುನಾವಣೆಯ ಪ್ರಚಾರಕ್ಕಾಗಿ ಅವರು ಕೆಲವು ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದರು. ಈ ತಿಂಗಳ 2ರಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಅಂದಿನಿಂದ ಅವರು ಜೈಲಿನಲ್ಲಿದ್ದಾರೆ.

ಇತ್ತೀಚೆಗಷ್ಟೇ ರೌಸ್ ಅವೆನ್ಯೂ ಸಿಬಿಐ ವಿಶೇಷ ನ್ಯಾಯಾಲಯ ಕೇಜ್ರಿವಾಲ್ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

You cannot copy content of this page

Exit mobile version