ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ : ನವೆಂಬರ್‌ 11ರಂದು ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು : ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದ್ದು , ನವೆಂಬರ್‌ 11 ರಂದು ಪ್ರಧಾನಿ ನರೇಂದ್ರ ಮೋದಿ ಅದನ್ನು ಲೋಕಾರ್ಪಣೆ ಮಾಡಲಿದ್ದಾರೆ.

ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ನವೆಂಬರ್‌ 11 ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಕಂಚಿನ ಸಭೆಯನ್ನು ಲೋಕಾರ್ಪಣೆ ಮಾಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.

ಈ ಹಿನ್ನಲೆಯಲ್ಲಿ  ಕಾರ್ಯಕ್ರಮದ ಪೂರ್ವಭಾವಿ ತಯಾರಿಗಾಗಿ ಉನ್ನತ ಶಿಕ್ಷಣ ಸಚಿವ ಸಿ.ಎನ್‌ ಅಶ್ವತ್‌ ನಾರಾಯಣ್, ಕಂದಾಯ ಸಚಿವ ಆರ್‌ ಅಶೋಕ್‌ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು